1:31 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಮದುವೆಗೆ ಮನೆಯವರ ವಿರೋಧ; ಕಾರಿನಲ್ಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವ ಜೋಡಿ ಸಾವಿಗೆ ಶರಣು

22/05/2022, 22:11

ಬ್ರಹ್ಮಾವರ(reporterkarnataka.com): ಹೆಗ್ಗುಂಜೆ ಬಳಿ ಇಂದು ಬೆಳಗ್ಗೆ ( ಭಾನುವಾರ) ಕಾರಿನಲ್ಲೇ  ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. 

ಬೆಂಗಳೂರಿನ ಹೆಬ್ಬಾಳದ ಯಶವಂತ್ ಯಾದವ್ (23) ಮತ್ತು ಜ್ಯೋತಿ (23) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ಶನಿವಾರ ಮದುವೆ ಮಾಡಿಕೊಂಡು ಮನೆಗೆ ಕರೆಮಾಡಿದ್ದಾರೆ .  ಮನೆಯವರು ವಿರೋಧಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡು  ಪೆಟ್ರೊಲ್ ಸುರಿದುಕೊಂಡು  ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ನಲ್ಲಿ ಹುಡುಗಿಯನ್ನು ಕರೆದುಕೊಂಡು ಬಂದ ಯಶವಂತ್ ಮಂಗಳೂರಿನ ದೇವಾಲಯದಲ್ಲಿ ಮದುವೆ ಮಾಡಿಕೊಂಡು ನಂತರ ಮನೆಗೆ ಕರೆ ಮಾಡಿದ್ದಾರೆ. ವಿರೋಧ ವ್ಯಕ್ತವಾದ ಬಳಿಕ ಆತಂಕಗೊಂಡ ಅವರು

ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ  ಸೆಲ್ಫ್ ಡ್ರೈವ್ ಕಾರಿನಲ್ಲಿ ಡ್ರೈವಿಂಗ್ ಮಾಡಿಕೊಂಡು ಬಾಟಲ್ ನಲ್ಲಿ ಪೆಟ್ರೋಲ್ ತುಂಬಿಕೊಂಡು ಬಂದ್ದಿದ್ದು ಹೆಗ್ಗುಂಜೆ ಸಮೀಪ ನಿರ್ಜನ ಪ್ರದೇಶದಲ್ಲಿ  ಬಾಟಲ್ ನಲ್ಲಿದ್ದ  ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಬೆಳಗ್ಗೆ ಎರಡು ಗಂಟೆವರೆಗು ಸುತ್ತಾಡಿ  ನಂತರ ಆತ್ಮಹತ್ಯೆ ಮಾಡಿಕೊಂಡ ಸ್ಥಳದ ಲೊಕೇಶನ್ ಅನ್ನು ಹಾಗು ಮದುವೆ ಮಾಡಿಕೊಂಡ ಪೋಟೊ ಮನೆಯವರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಬ್ರಹ್ಮಾವರ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು