5:43 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಮಹಾಕುಂಭಮೇಳ: ಅ.13ರಂದು ಕೆ.ಆರ್.ಪೇಟೆಯಲ್ಲಿ ಮಹದೇಶ್ವರ ಜ್ಯೋತಿ ರಥಯಾತ್ರೆ, ಜಿಲ್ಲಾ ಜನಪದ ಉತ್ಸವ

07/10/2022, 23:23

ಡಾ.ಕೆ.ಆರ್.ನೀಲಕಂಠ ಕೃಷ್ಣರಾಜಪೇಟೆ ಮಂಡ್ಯ

info.reporterkarnataka @gmail.com

ಮಂಡ್ಯ(reporter Karnataka com): ಕೃಷ್ಣರಾಜಪೇಟೆ ತಾಲ್ಲೂಕಿನ ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳವು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ಜನರಲ್ಲಿ ಜಾಗೃತಿ ಮೂಡಿಸಲು ಅಕ್ಟೋಬರ್ 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ನುಡಿಸಿರಿ ಖ್ಯಾತಿಯ ಡಾ. ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲಾ ಜನಪದ ಉತ್ಸವ ಕಾರ್ಯಕ್ರಮ ನಡೆಯಲಿದೆ.

ಜನಪದ ಉತ್ಸವದಲ್ಲಿ 3 ಸಾವಿರ ಕಲಾವಿದರು ಹಾಗೂ 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಗೃತಿ ಮೆರವಣಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ ಎಂದು ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ತಿಳಿಸಿದರು.

ಅವರು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಳ್ವಾಸ್ ನುಡಿಸಿರಿ ವ್ಯವಸ್ಥಾಪಕ ಸಿಬ್ಬಂದಿಗಳು, ಪಟ್ಟಣದ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಸಿ ಮಾತನಾಡಿದರು.
ಅಕ್ಟೋಬರ್13ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಿಂದ ಆರಂಭವಾಗುವ ಮಹದೇಶ್ವರರ ಜ್ಯೋತಿ ರಥ ಯಾತ್ರೆಯಲ್ಲಿ 100 ಜಾನಪದ ಕಲಾತಂಡಗಳ 3 ಸಾವಿರ ಕಲಾವಿದರು, 5 ಸಾವಿರ ಕಾಲೇಜು ವಿದ್ಯಾರ್ಥಿಗಳು ವೇಷಭೂಷಣಗಳನ್ನು ತೊಟ್ಟು ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವೈವಿಧ್ಯಮಯವಾದ ಮೆರವಣಿಗೆ ನಡೆಸಿ ಪುರಸಭಾ ಕಾರ್ಯಾಲಯದ ಪಕ್ಕದಲ್ಲಿರುವ ಬೃಹತ್ ಮೈದಾನವನ್ನು ತಲುಪಲಿದ್ದಾರೆ. ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಯಕ್ಷಗಾನ ಪ್ರಸಂಗಗಳ ಪ್ರದರ್ಶನವು ನಡೆಯಲಿದ್ದು ಕೆ.ಆರ್.ಪೇಟೆ ಪಟ್ಟಣದಲ್ಲಿ ಹಬ್ಬದ ವಾತಾವರಣವು ನಿರ್ಮಾಣವಾಗಲಿದೆ. ಮಹದೇಶ್ವರ ಜ್ಯೋತಿ ರಥಯಾತ್ರೆಯು ಹಾದು ಹೋಗುವ ಮಾರ್ಗದುದ್ದಕ್ಕೂ ರಂಗೋಲಿಗಳನ್ನು ಹಾಕಿಸಿ ತಳಿರು ತೋರಣಗಳಿಂದ ಸಿಂಗರಿಸಲಾಗುವುದು. ಕೆ.ಆರ್.ಪೇಟೆ ಪಟ್ಟಣದ ಜನತೆ ಜಿಲ್ಲಾ ಮಟ್ಟದ ಜನಪದ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾಕುಂಭಮೇಳದ ಯಶಸ್ಸಿಗೆ ಕೈಜೋಡಿಸಬೇಕು. ಮಹಾಕುಂಭಮೇಳ ಕಾರ್ಯಕ್ರಮದಲ್ಲಿ ಕನಿಷ್ಠ 6 ಲಕ್ಷಕ್ಕೂ ಹೆಚ್ಚಿನ ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದ್ದು ಭಕ್ತಾದಿಗಳ 4 ದಿನಗಳ ಕಾಲ ನಡೆಯಲಿರುವ ಮಹಾದಾಸೋಹಕ್ಕೆ ಅಕ್ಕಿ, ಬೇಳೆ, ಬೆಲ್ಲ, ತೆಂಗಿನಕಾಯಿ, ರೀಫೈಂಡ್ ಆಯಲ್, ನಂದಿನಿ ತುಪ್ಪ ಸೇರಿದಂತೆ ಅವಶ್ಯಕ ವಸ್ತುಗಳನ್ನು ಉದಾರವಾಗಿ ದಾನ ಮಾಡಬೇಕು ಎಂದು ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಮನವಿ ಮಾಡಿದರು.
ಸಮಾಲೋಚನಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ನಾಗರಾಜು, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ತಹಶೀಲ್ದಾರ್ ಎಂ.ವಿ.ರೂಪ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್, ಪುರಸಭೆ ಮುಖ್ಯಾಧಿಕಾರಿ ಕುಮಾರ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಆಳ್ವಾಸ್ ನುಡಿಸಿರಿ ಸಾಂಸ್ಕೃತಿಕ ಕಲಾತಂಡಗಳ ವ್ಯವಸ್ಥಾಪಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು