9:36 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ; ಬಿಜೆಪಿ- ಶಿವಸೇನೆ ನಡುವೆ ಹಲವೆಡೆ ಸಂಘರ್ಷ; ಕೇಂದ್ರ ಸಂಪುಟದಿಂದ ರಾಣೆ ವಜಾಕ್ಕೆ ಪ್ರಧಾನಿಗೆ ಆಗ್ರಹ

24/08/2021, 18:50

ಮುಂಬೈ (reporterkarnataka.com): ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ವಿರುದ್ಧ ಕೇಂದ್ರ ಸಚಿವ ನಾರಾಯಣ ರಾಣೆ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಜೆಪಿ ಹಾಗೂ ಶಿವಸೇನೆ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿದೆ. ಮುಂಬೈಯಲ್ಲಿರುವ ರಾಣೆ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಶಿವಸೇನೆ ಕಾರ್ಯಕರ್ತರು ಯತ್ನಿಸಿದ್ದಾರೆ. ನಾಸಿಕ್ ನಲ್ಲಿ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದೆ.

ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಘೋಷಣೆ ಕೂಗಿದ ಶಿವಸೇನಾ ಕಾರ್ಯಕರ್ತರು, ನಾಸಿಕ್​ನ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಿಜೆಪಿ ಕಚೇರಿಗೆ ಹಾನಿಯುಂಟು ಮಾಡಿದೆ. ಪೊಲೀಸರು ಮಧ್ಯ ಪ್ರವೇಶಿಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

ಮುಂಬೈ, ರತ್ನಗಿರಿಯಲ್ಲಿಯೂ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಮುಂಬೈನಲ್ಲಿರುವ ಸಚಿವ ನಾರಾಯಣ ರಾಣೆ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಹಾಗೂ ಶಿವಸೇನಾ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ, ಎರಡೂ ಪಕ್ಷಗಳ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಶಿವಸೇನೆ-ಬಿಜೆಪಿ ನಡುವೆ ಘರ್ಷಣೆ ರತ್ನಗಿರಿಯಲ್ಲೂ ಶಿವಸೇನಾ ಕಾರ್ಯಕರ್ತರು ಕೇಂದ್ರ ಸಚಿವ ವಿರುದ್ಧ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಹಾಗೂ ನಾರಾಯಣ ರಾಣೆ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ರಾಣೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಶಿವಸೇನಾ ಸಂಸದ ವಿನಾಯಕ್ ರಾವತ್, ಪ್ರಧಾನಿ ಮೋದಿಗೆ ಪತ್ರ ಬರೆದು ಕೇಂದ್ರ ಕ್ಯಾಬಿನೆಟ್​​ನಿಂದ ರಾಣೆಯನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು