6:37 PM Tuesday9 - September 2025
ಬ್ರೇಕಿಂಗ್ ನ್ಯೂಸ್
Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ…

ಇತ್ತೀಚಿನ ಸುದ್ದಿ

ಮಹಾರಾಷ್ಟದಲ್ಲಿ ಭಾರಿ ಮಳೆ: ಮುಂಬೈ ಸಹಿತ 11 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

14/07/2022, 22:32

ಮುಂಬೈ(reporterkarnataka.com):
ದಕ್ಷಿಣ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಹಾರಾಷ್ಟ್ರದಲ್ಲಿ ಮತ್ತೆ ಮಹಾ ಮಳೆಯ ಭೀತಿ ಎದುರಾಗಿದೆ. 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯಾದ್ಯಂತ ಗುರುವಾರದಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ಆಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ ರೆಡ್‌ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬರದ ನಾಡು ಉತ್ತರ ಕರ್ನಾಟಕ ಈಗ ಅಕ್ಷರಶಃ ಮಲೆನಾಡು ಆಗಿ ಬದಲಾಗಿದ್ದು, ನಿರಂತರ ಸುರಿಯುತ್ತಿರುವ ಮಳೆಗೆ ಎಲ್ಲೆಡೆ ಹಸಿರ ವಾತಾವರಣ ಕಾಣಿಸುತ್ತಿದೆ.

ಇನ್ನು, ಈ ಹವಾಮಾನ ವೈಪರಿತ್ಯದಿಂದಾಗಿ ಜನರಲ್ಲಿ ಜ್ವರ, ಶೀತ ಸಂಬಂಧಿತ ರೋಗ ಲಕ್ಷಣಗಳು ಕಾಣಿಸುತ್ತಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಮುಂದುವರಿದಿದ್ದು, 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಳೆ ಮತ್ತು ಪ್ರವಾಹ ಮುಂದುವರಿದಿದ್ದು, ಹಲವೆಡೆ ಭೂಕುಸಿತವೂ ಉಂಟಾಗಿದ್ದು, ಮುಂಬೈ ಮತ್ತು ಪುಣೆ ಸೇರಿದಂತೆ ಮಹಾರಾಷ್ಟ್ರದ 11 ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮಹಾರಾಷ್ಟ್ರದ ಮುಂಬೈ, ರತ್ನಗಿರಿ, ಕೊಲ್ಹಾಪುರ, ರಾಯಗಡ, ಅಮರಾವತಿ, ಸತಾರಾ, ಸಿಂಧುದುರ್ಗ ಮತ್ತು ಥಾಣೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು