ಇತ್ತೀಚಿನ ಸುದ್ದಿ
ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ: ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬಹುಮತ ಪ್ರಾಪ್ತಿ
04/07/2022, 21:43
ಮುಂಬೈ(reporterkarnataka.com): ಬಿಜೆಪಿ ಬೆಂಬಲದೊಂದಿಗೆ ನೂತನವಾಗಿ ಅಸ್ತಿತ್ವಕ್ಕೆ ಬಂದ
ಏಕನಾಥ್ ಶಿಂಧೆ ನೇತೃತ್ವದ ಸರಕಾರ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದೆ.
ಶಿಂಧೆ ಅವರು164 ಮತಗಳಿಂದ ವಿಶ್ವಾಸಮತ ಪರೀಕ್ಷೆಯಲ್ಲಿ ಗೆದ್ದು ಸದನದಲ್ಲಿ ತನ್ನ ಬಹುಮತ.ಸಾಬೀತುಪಡಿಸಿದರು.ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಇತರ 39 ಶಾಸಕರೊಂದಿಗೆ ತಮ್ಮ ಪಕ್ಷವಾದ ಶಿವಸೇನೆ ವಿರುದ್ಧ ಬಂಡಾಯವೆದ್ದು ಬಿಜೆಪಿ ಜತೆ ಕೈ ಜೋಡಿಸಿದ್ದರು. ಸದನದಲ್ಲಿ ಬಹುಮತ ವೇಳೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಆಲ್ ಇಂಡಿಯಾ ಮಜ್ಲಿಸೆ ಇ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮತದಾನದಿಂದ ಹೊರಗುಳಿದಿದ್ದು, ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಎಂಟು ಶಾಸಕರು ಈ ವೇಳೆ ಗೈರಾಗಿದ್ದರು.