5:44 AM Monday14 - April 2025
ಬ್ರೇಕಿಂಗ್ ನ್ಯೂಸ್
Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ…

ಇತ್ತೀಚಿನ ಸುದ್ದಿ

Mahaveera Jayanthi | ಭಗವಾನ್ ಮಹಾವೀರರ ಸಂದೇಶ ವಿಶ್ವಕ್ಕೆ ಇಂದು ಪ್ರಸ್ತುತ : ಸ್ಪೀಕರ್ ಖಾದರ್

11/04/2025, 11:04

ಮಂಗಳೂರು(reporterkarnataka.com): ಭಗವಾನ್ ಶ್ರೀ ಮಹಾವೀರರು ಈ ಜಗತ್ತನ್ನು ಸತ್ಯದ ನೆಲೆಯಲ್ಲಿ ರೂಪಿಸಿ, ಉತ್ತಮ ಸಮಾಜ ರಚಿಸಲು ಪರಿಶ್ರಮಿಸಿದ್ದಾರೆ. ಅವರ ಸಂದೇಶ ಇಡೀ ವಿಶ್ವಕ್ಕೆ ಇಂದು ಪ್ರಸ್ತುತ ವಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜೈನ್ ಸೊಸೈಟಿ ಮತ್ತು ಜೈನ್ ಮಿಲನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾವೀರರ ಸಂದೇಶಗಳನ್ನು ಯಾವುದೇ ಧರ್ಮ ಅಥವಾ ಪ್ರದೇಶಕ್ಕೆ ಸೀಮಿತಗೊಳಿಸಬಾರದು. ತಾಳ್ಮೆ ಮತ್ತು ಪ್ರೀತಿಯಿಂದ ಸಮಾಜವನ್ನು ಕಟ್ಟಬೇಕೆಂಬ ಅವರ ನೀತಿಯು ಮಾದರಿಯಾಗಿದೆ. ಮಹಾಪುರುಷರ ಜಯಂತಿ ಕಾರ್ಯಕ್ರಮ ಯಾವುದೇ ನಿರ್ದಿಷ್ಟ ಜಾತಿ, ಪಂಗಡಗಳಿಗೆ ಸೀಮಿತವಾಗಬಾರದು. ಎಲ್ಲ ವರ್ಗದ ಜನರು ಭಾಗವಹಿಸಿ ಆಚರಿಸಿದರೆ ಮಹಾಪುರುಷರ ಸಂದೇಶವು ಸರ್ವರಿಗೂ ತಲುಪಲಿದೆ ಎಂದು ಯು.ಟಿ. ಖಾದರ್ ತಿಳಿಸಿದರು.
ತಮ್ಮ ಜೀವನವನ್ನೇ ಜನರಿಗೆ ಮಾದರಿಯಾಗಿಸಿ, ಅವರ ಹೃದಯ ಗೆದ್ದ ವ್ಯಕ್ತಿತ್ವ ಮಹಾವೀರರದ್ದಾಗಿದೆ ಎಂದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಸತ್ಯ ಮತ್ತು ಅಹಿಂಸೆ ಮೂಲಕ ಜಗತ್ತನ್ನೇ ಗೆಲ್ಲಬಹುದು ಎಂಬುದನ್ನು ಮಹಾವೀರರು ತೋರಿಸಿದ್ದಾರೆ ಎಂದು ಹೇಳಿದರು.
ಸಮಾರಂಭದಲ್ಲಿ ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಜೈನ್ ಸೊಸೈಟಿ ಗೌರವಾಧ್ಯಕ್ಷ ಸುರೇಶ್ ಬಲ್ಲಾಲ್, ಕಾರ್ಯದರ್ಶಿ ಸಚಿನ್ ಕುಮಾರ್, ಜೈನ್ ಮಿಲನ್ ಅಧ್ಯಕ್ಷ ರತ್ನಾಕರ ಜೈನ್ ಮತ್ತಿತರರು ಉಪಸ್ಥಿತರಿದ್ದರು.
ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಉಪನ್ಯಾಸ ನೀಡಿದರು.
ಜೈನ್ ಸೊಸೈಟಿ ಅಧ್ಯಕ್ಷ ಪುಷ್ಪರಾಜ ಜೈನ್ ಸ್ವಾಗತಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ವಂದಿಸಿದರು. ಸುಕುಮಾರ ಬಲ್ಲಾಲ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು