2:30 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಹಿಳಾ ಮತ್ತು ಮಕ್ಕಳ ಇಲಾಖೆಯ ವಿವಿಧ ಯೋಜನೆಗಳ ತ್ರೈಮಾಸಿಕ ಸಭೆ: ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳಿಗೆ ಪುನರ್ವಸತಿ

13/11/2024, 10:54

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸರ್ಕಾರಿ ದತ್ತು ಸಂಸ್ಥೆಯು 0-6 ವರ್ಷದೊಳಗಿನ ಕುಟುಂಬದ ಪ್ರೀತಿ ವಂಚಿತ, ಅನಾಥ, ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳ ಪುನರ್ವಸತಿಗೆ ನೆರವಾಗುವ ಒಂದು ಸೂಕ್ತ ಸಂಸ್ಥೆಯಾಗಿದೆಯೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಅಭಿಪ್ರಾಯಪಟ್ಟರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಿಷನ್ ವಾತ್ಸಲ್ಯ ಯೋಜನೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ವತಿಯಿಂದ ಹಮ್ಮಿಕೊಂಡಿದ್ದ, ಇಲಾಖೆಯ ವಿವಿಧ ಯೋಜನೆಗಳ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಇಂತಹ ಮಕ್ಕಳಿಗೆ ಶಾಶ್ವತ ಕುಟುಂಬದ ವ್ಯವಸ್ಥೆಯನ್ನು ಕಾನೂನು ಬದ್ಧವಾಗಿ ಕಲ್ಪಿಸಲು ದತ್ತು ಸಂಸ್ಥೆಯು ನೆರವಾಗುತ್ತದೆ. ವೀಕ್ಷಣಾಲಯ ಕಾನೂನಿನೊಂದಿಗೆ ಸಂಘರ್ಷಕ್ಕೊಳಪಟ್ಟ 18 ವರ್ಷದೊಳಗಿನ ಮಕ್ಕಳ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆ ಬಾಕಿ ಇರುವ ಅವಧಿಯಲ್ಲಿ ತಾತ್ಕಾಲಿಕವಾಗಿ ಅಭಿರಕ್ಷಣೆ ಒದಗಿಸುವ ಸಂಸ್ಥೆಯಾಗಿದೆ ಎಂದರು.


ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಬಂದ ಮಕ್ಕಳ ಪ್ರಕರಣ ವಿಚಾರಣೆ ವೇಳೆಯಲ್ಲಿ ರಕ್ಷಣೆ ಮತ್ತು ಘೋಷಣೆ ಅಗತ್ಯವಿರುವ ಮಕ್ಕಳ ಪಾಲನೆ ಮತ್ತು ರಕ್ಷಣೆಗಾಗಿ ಹಾಗೂ ದೀರ್ಘಾವಧಿ ಪುನರ್ವಸತಿಗಾಗಿ ಬಾಲಕರ ಮತ್ತು ಬಾಲಕಿಯರಿಗಾಗಿ ಪ್ರತ್ಯೇಕ ಬಾಲ ಮಂದಿರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಒಟ್ಟು 42 ಮಕ್ಕಳು ದಾಖಲಾಗಿರುತ್ತಾರೆ ಎಂದರು. ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಕೋವಿಡ್-19 ರಿಂದ ಇಬ್ಬರು ಪೋಷಕರನ್ನು ಕಳೆದುಕೊಂಡ 8 ಮಕ್ಕಳಿಗೆ ಮಾಸಿಕ ರೂ.3,500/ಗಳ ಆರ್ಥಿಕ ಧನ ಸಹಾಯವನ್ನು ಆ‌ರ್.ಟಿ.ಜಿ.ಎಸ್ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆಯನ್ನು ಮಾಡಲಾಗುತ್ತಿದೆ. ಪಿ.ಎಂ ಕೇರ್ ಫಾರ್ ಚಿಲ್ಡನ್ ಯೋಜನೆಯಡಿ ಮಕ್ಕಳ ಮಾಹಿತಿಯನ್ನು ಪಿ.ಎಂ. ಕೇರ್ ಪೋರ್ಟಲ್‌ನಲ್ಲಿ ಅಳವಡಿಸಲಾಗಿದ್ದು, ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ನುಡಿದರು.
ರಾಷ್ಟ್ರ ವ್ಯಾಪ್ತಿಯಲ್ಲಿ ಚಾಲ್ತಿಯಲ್ಲಿರುವ ಮಕ್ಕಳ ಸಹಾಯವಾಣಿ ಯಾವುದೇ ರೀತಿಯಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ರಕ್ಷಣೆ ಮತ್ತು ಪೋಷಣೆ ಅವಶ್ಯಕತೆ ಇರುವ ಮಕ್ಕಳಿಗೆ ತುರ್ತು ಸೇವೆಯನ್ನು ಒದಗಿಸಲು ಮಕ್ಕಳ ಸಹಾಯವಾಣಿ- 1098 ನ್ನು ಇ.ಆರ್.ಎಸ್.ಎಸ್-112 ನೊಂದಿಗೆ ವಿಲೀನಗೊಳಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿ ಅನುಸ್ಥಾನಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
6 ವರ್ಷ ವಯಸ್ಸಿನ ಮೇಲ್ಪಟ್ಟ ಬಾಲಕ-ಬಾಲಕಿಯರನ್ನು ಸ್ಥಳೀಯ ಮೂರಾರ್ಜಿ ದೇಸಾಯಿ ಶಾಲೆಗಳಲ್ಲಿ ದಾಖಲು ಮಾಡಲು ಕ್ರಮಕೈಗೊಳ್ಳಿ ಎಂದು ಸೂಚಿಸಿದ ಅವರು ಈಗಾಗಲೇ 1108 ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಇದ್ದು, ಉಳಿದ ಅಂಗನವಾಡಿ ಕೇಂದ್ರಗಳಿಗೆ ನಿವೇಷನ ಒದಗಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಉಪಕಾರ ಯೋಜನೆ, ಪ್ರಾಯೋಜಕತ್ವ ಯೋಜನೆ, ಪೋಕ್ಸೋ ಕಾಯ್ದೆಯಡಿ ಪರಿಹಾರ ಯೋಜನೆ, ಬಾಲನ್ಯಾಯ ಯೋಜನೆ, ಬಾಲ್ಯವಿವಾಹ ತಡೆ ಯೋಜನೆ, ಭಿಕ್ಷಟನಾ ನಿರ್ಮೂಲನಾ ಯೋಜನೆ, ಬಾಲ ಕಾರ್ಮಿಕರ ಕಾಯ್ದೆ, ಮಕ್ಕಳ ಸಹಾಯವಾಣಿ ಪ್ರಕರಣಗಳು, ಕುಟುಂಬ ದೌರ್ಜನ್ಯ ತಡೆ ಯೋಜನೆ, ಬಾಲಕಿಯರ ವಸತಿ ನಿಲಯಗಳ ನಿರ್ವಹಣೆ, ಸಖಿ ವನ್ ಸ್ಟಾಪ್ ಯೋಜನೆ, ಸ್ವಾದರಗೃಹ ಯೋಜನೆ, ಪೋಷಣೆ ಅಭಿಯಾನ, ಮಿಷನ್ ಶಕ್ತಿ ಯೋಜನೆ, ಮಾತೃವಂದನ ಮತ್ತು ಗೃಹಲಕ್ಷ್ಮಿ ಯೋಜನೆಗಳು ಸೇರಿದಂತೆ ಹಲವಾರು ಯೋಜನೆಗಳ ಕುರಿತು ಪ್ರಗತಿ ಪರಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ ಎಸ್.ಹೊಸಮನಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಕೆಜಿಎಫ್ ಡಿಎಸ್‌ಪಿ ಪಾಂಡುರಂಗ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು