11:57 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಹಿಳೆ ಮತ್ತು ಕಾನೂನು ಹಾಗೂ ಮಹಿಳೆಯರಿಗಾಗಿ ಮಾನಸಿಕ ಆರೋಗ್ಯದ ಕುರಿತು ಕಾನೂನು ಅರಿವು ನೆರವು

18/01/2024, 15:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ: ಜ18 ನ್ಯಾಯಾಲಯದ ಆವರಣದಲ್ಲಿ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ. ಮಹಿಳೆ ಮತ್ತು ಕಾನೂನು ಹಾಗೂ ಮಹಿಳೆಯರಿಗಾಗಿ ಮಾನಸಿಕ ಆರೋಗ್ಯದ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು. ಸಿವಿಲ್ ನ್ಯಾಯಾಧೀಶರಾದ ಸಿ.ಮಹಾಲಕ್ಷ್ಮೀ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹೊಸಪೇಟೆಯ ಸಾರ್ವಜನಿಕ ಆಸ್ಪತ್ರೆಯ ಮಾನಸಿಕ ವೈದ್ಯ ತಜ್ಞರ‍ಾದ ಕೆ.ಸಿ.ಕಾವ್ಯ ಹಾಗೂ ಜಿ.ಮಾರೇಶ ರವರು, ಮಾನಸಿಕ ಆರೋಗ್ಯ ಕುರಿತು ಉಪನ್ಯಾಸ ನೀಡಿದರು. ಪ್ರಭಾರ ಸಿಡಿಪಿಒ ಶ್ರೀಮತಿ ಮಾಲಂಬಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಸಹಾಯಕ ಅಭಿಯೋಜಕರಾದ ವೈ.ಶಿಲ್ಪ, ವಕೀಲರ ಸಂಘದ ಉಪಾಧ್ಯಕ್ಷ ಹೆಚ್.ವೆಂಕಟೇಶ, ಹಿರಿಯ ಮಹಿಳಾ ನ್ಯಾಯವಾದಿ ಕೆ.ಎಚ್.ಎಂ. ಶೈಲಜಾ ಮಾತನಾಡಿದರು. ಪ್ಯಾನಲ್ ವಕೀಲರಾದ ಜಯಮ್ಮ ನಿರೂಪಿಸಿದರು. ವಕೀಲರಾದ ಟಿ.ರಮೇಶ ಸ್ವಾಗತಿಸಿ ವಂದಿಸಿದರು. ಸಿಡಿಪಿಒ ಇಲಾಖೆಯ ವಿವಿದ ಅಧಿಕಾರಿಗಳು ಉಪಸ್ಥಿತರಿದ್ದರು.


ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ವಿವಿದ ಇಲಾಖೆಗಳ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು