ಇತ್ತೀಚಿನ ಸುದ್ದಿ
ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಯ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾದ ಗೃಹ ಸಚಿವ ಡಾ. ಪರಮೇಶ್ವರ್
11/12/2023, 21:25
ಬೆಳಗಾವಿ(reporterkarnataka.com): ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿದರು.
ಗೃಹ ಸಚಿವರು ಹಲ್ಲೆಗೊಳಗಾದ ಮಹಿಳೆಯಿಂದ ಘಟನೆ ಕುರಿತು ಮಾಹಿತಿ ಪಡೆದರು.
ಸಂತ್ರಸ್ತ ಮಹಿಳೆಯ 24ರ ಹರೆಯದ ಮಗ ಯುವತಿಯೊಬ್ಬಳ ಪ್ರೀತಿಸುತ್ತಿದ್ದು, ಇಬ್ಬರು ಜೊತೆಗೆ ಹೋಗಿದ್ದಾರೆ. ಇದರಿಂದ ಯುವಕನ ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಸುಮಾರು 8ರಿಂದ 10 ಮಂದಿ ಇದ್ದ ಗುಂಪು ಮಹಿಳೆಯ ಮೇಲೆ ಹಲ್ಲೆ ನಡೆಸಿ, ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಡಿ ಹಾಕಿದ್ದಾರೆ. ಇದೊಂದು ಅಮಾನವೀಯ ಘಟನೆ. ಪ್ರಕರಣ ಸಂಬಂಧಿಸಿದಂತೆ 7 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇನ್ನಿಬ್ಬರು ತಲೆ ಮರೆಸಿಕೊಂಡಿದ್ದಾರೆ ಎಂದು ಮಾಧ್ಯಮಗಳಿಗೆ ಗೃಹ ಸಚಿವರು ವಿವರ ನೀಡಿದರು.