10:03 PM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಮಹಿಳೆಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

18/08/2023, 20:11

ಬೆಂಗಳೂರು(reporterkarnataka.com): ನಗರದ ಹೊರವಲಯದ ಬನ್ನೇರುಘಟ್ಟದ ಬಳಿ
ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೈಗೈದ ಪ್ರಕರಣ ಪ್ರಮುಖ ಆರೋಪಿ ಕಾಲಿಗೆ ಗುಂಡಿಕ್ಕಿ ಬಂಧಿಸಲಾಗಿದೆ.
ಬನ್ನೇರುಘಟ್ಟದ ಬ್ಯಾಟರಾಯನದೊಡ್ಡಿಯ ಬಳಿ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿ ಪ್ರಕರಣದ ಆರೋಪಿ
ಸೋಮ ಅಲಿಯಾಸ್ ಸೋಮಶೇಖರ್ ಗೆ ನಾರಾಯಣ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಸೆರೆ ಹಿಡಿದಿದ್ದಾರೆ. ಆರೋಪಿಗೆ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬನ್ನೇರುಘಟ್ಟ ಬಳಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ
ಇಂದು ಬೆಳಗ್ಗೆ ಅತ್ಯಾಚಾರ ಪ್ರಕರಣದ ಸ್ಥಳ ಮಹಜರಿಗೆ ಆರೋಪಿಯನ್ನು ಕರೆದೊಯ್ಯುವಾಗ ಮೂತ್ರ ವಿಸರ್ಜನೆ ನೆಪದಲ್ಲಿ ಜೀಪ್ ನಿಂದ ಕೆಳಗಿಳಿದು ಪರಾರಿಯಾಗಲು ಯತ್ನಿಸಿದ್ದ. ಆಗ ಬೆನ್ನಟ್ಟಿದ ಪೇದೆ ಮಾದಪ್ಪ ಮೇಲೆ ಡ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾನೆ. ಡ್ಯಾಗರ್ ಎಸೆದು ಶರಣಾಗುವಂತೆ ಜಿಗಣಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ ಮತ್ತೆ ಹಲ್ಲೆಗೆ ಮುಂದಾದಾಗ ಮತ್ತೊಂದು ಗುಂಡು ಹಾರಿಸಿದ್ದು ಅದು ಎಡಗಾಲಿಗೆ ತಗುಲಿ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಬಂಧಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ
ತಿಳಿಸಿದ್ದಾರೆ.
ಬನ್ನೇರುಘಟ್ಟದ ಬ್ಯಾಟರಾಯನದೊಡ್ಡಿ ನಿವಾಸಿ 38ರ ಹರೆಯದ ಮಹಿಳೆಯ
ಮೇಲೆ ನಿರ್ಜನ ಪ್ರದೇಶದಲ್ಲಿ ಆರೋಪಿ ಸೋಮ ಸೇರಿ ಮೂವರು ಕಾಮುಕರು ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದರು.
ಮಹಿಳೆ ದೇಹದ ಮೇಲೆ ಗಾಯದ ಗುರುತುಗಳು
ಪತ್ತೆಯಾಗಿದ್ದು, ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ
ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಕಂಡುಬಂದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು