8:47 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮಹಿಳೆಯರ ಶೈಕ್ಷಣಿಕ ಹಕ್ಕಿಗೆ ಹೋರಾಡಿದ ಮಹಾ ಮಾತೆ ಸಾವಿತ್ರಿ ಬಾಯಿ ಪುಲೆ: ಶಾಸಕ ಡಾ.ಎನ್.ಟಿ. ಶ್ರೀನಿವಾಸ್

03/01/2024, 22:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಹೆಣ್ಣು ಮಕ್ಕಳ ಶಿಕ್ಷಣ ಹಕ್ಕುಗಳಿಗಾಗಿ, ಸಾವಿತ್ರಿ ಬಾ ಪುಲೆ ಅವರು ನಡೆಸಿದ ಹೋರಾಟ ಇಂದಿಗೂ ಸ್ಪೂರ್ತಿ ಎಂದು ಶಾಸಕ ಡಾ. ಎನ್.ಟಿ.ಶ್ರೀನಿವಾಸ್ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ,ಕೂಡ್ಲಿಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ಸಾವಿತ್ರಿ ಬಾ ಪುಲೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಗಳಿಗಾಗಿ ಹೋರಟ ನಡೆಸಿದ ಸಾವಿತ್ರಿ ಬಾ ಪುಲೆರವರು, ಇಂದಿಗೂ ಎಂದೆಂದಿಗೂ ಸ್ಪೂರ್ತಿದಾಯಕರಾದವರು ಎಂದು ಶಾಸಕರು ನುಡಿದರು.
ಕೂಡ್ಲಿಗಿ ಕ್ಷೇತ್ರದ  ಗುಣಮಟ್ಟದ ಶಿಕ್ಷಣಕ್ಕಾಗಿ,ಪ್ರತಿಯೊಬ್ಬರು ಪತ್ರ ಬರೆಯುವ ಮೂಲಕ  ಅನೇಕ ಸಲಹೆ ಮತ್ತು ಸೂಚನೆ ನೀಡುತ್ತಿರುವುದು ಸಂತಸ  ತಂದಿದೆ ಎಂದರು. 
ಸಾವಿತ್ರಿ ಬಾ ಪುಲೆ ಅವರ ಪ್ರಶಸ್ತಿಗೆ ಪಾತ್ರರಾಗಿರುವ ಗುರು ಮಾತೆಯರು ಹಾಗೂ ಶಿಕ್ಷಕಿಯರು, ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ  ಸೇವೆ ಸಲ್ಲಿಸುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದರು. ಮತ್ತು ಅವರೆಲ್ಲರಿಗೂ ಶಾಸಕರು ಅಭಿನಂಧನೆಗಳನ್ನು ತಿಳಿಸಿದರು. ನಂತರ ಸಂಘದ  ಬೇಡಿಕೆಗಳನ್ನು ಆಲಿಸಿದ ಶಾಸಕರು, ಮುಂದಿನ ದಿನಮಾನಗಳಲ್ಲಿ ಅವೆಲ್ಲವುಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು. ಗಣನೀಯ ಸೇವೆಸಲ್ಲಿಸಿದ ಹಾಗೂ ನಿವೃತ್ತ ಶಿಕ್ಷಕಿಯರನ್ನು, ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಹಶಿಲ್ದಾರರಾದ ಎಮ್.ರೇಣುಕಮ್ಮ ಸೇರಿದಂತೆ, ತಾಲೂಕು ಮಟ್ಟದ ವಿವಿದ ಇಲಾಖೆಗಳ ಅಧಿಕಾರಿಗಳು ಸಾವಿತ್ರಿ ಬಾಯಿ ಪುಲೆ ಶಿಕ್ಷಕರ ಸಂಘದ ಪದಾಧಿಕಾರಿಗಳು, ಹಾಗೂ ಸದಸ್ಯರು ಶಿಕ್ಷಕ ಶಿಕ್ಷಕಿಯರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು