8:11 AM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ನಿಯಂತ್ರಣ ಮಾಡುವಲ್ಲಿ ಸರಕಾರ ವಿಫಲ: ಬೊಮ್ಮಾಯಿ

23/01/2025, 23:13

ಹುಬ್ಬಳ್ಳಿ(reporterkarnataka.com): ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ ಮಹಿಳೆಯರಿಗೆ ಕಾರ್ಯಕ್ರಮ ಮಾಡುತ್ತೇನೆ ಎಂದು ಹೇಳುತ್ತಾರೆ. ಇನ್ನೊಂದು ಕಡೆ ಮಹಿಳೆಯರ ತಾಳಿ ಕಿತ್ತುಕೊಳ್ಳುತ್ತಿರುವಂತಹ ಮೈಕ್ರೊ ಫೈನಾನ್ಸ್ ನಿಯಂತ್ರಣ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ಹಿಂದೆ ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದಾಗ ಹೆಚ್ಚು ಬಡ್ಡಿ ವಸೂಲಿ ಮಾಡುವವರ ನಿಯಂತ್ರಣಕ್ಕೆ ಕಾನೂನು ತಂದಿದ್ದರು. ಅದು ಕೋರ್ಟ್ ನಲ್ಲಿ ಸ್ಟೇ ಆಗಿದೆ. ಈ ಸರ್ಕಾರ ಕೂಡಲೇ ಅದನ್ನು ತೆರವುಗೊಳಿಸಿ ಕಠಿಣ ಕ್ರಮ ಕೈಗೊಳ್ಳುವ ಅಧಿಕಾರ ಪಡೆದು, ಮೈಕ್ರೊ ಫೈನಾನ್ಸ್ ಗಳನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿದರು‌‌.

ಇತ್ತೀಚಿನ ಸುದ್ದಿ

ಜಾಹೀರಾತು