7:31 AM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಮೈಕ್ ಬಳಸಲು ಅನುಮತಿ ಕಡ್ಡಾಯ: ಧ್ವನಿವರ್ಧಕ ಅಬ್ಬರಕ್ಕೆ ಬ್ರೇಕ್​ ಹಾಕಿದ ಸರಕಾರ

11/05/2022, 08:45

ಬೆಂಗಳೂರು(reporterkarnataka.com):  ಧ್ವನಿವರ್ಧಕ ಬಳಸುವವರು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯ. ರಾತ್ರಿ10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ.

ಸುಪ್ರೀಂಕೋರ್ಟ್‌ ಆದೇಶದ ಹೊರತಾಗಿಯೂ ಹಲವು ಮಸೀದಿಗಳಲ್ಲಿ ಧ್ವನಿವರ್ಧಕಗಳಲ್ಲಿ ಆಜಾನ್‌ ಹೇಳುತ್ತಿರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳು ಸುಪ್ರಭಾತ ಅಭಿಯಾನಕ್ಕೆ ಮೇ 9ರಂದು ಚಾಲನೆ ನೀಡಿತ್ತು.

ಆಜಾನ್​ಗೆ ಪ್ರತಿಯಾಗಿ ಬ್ರಾಹ್ಮಿ ಮುಹೂರ್ತದಲ್ಲಿ ರಾಜ್ಯದ ವಿವಿಧ ದೇಗುಲಗಳಲ್ಲಿ ಏಕಕಾಲದಲ್ಲಿ ಸುಪ್ರಭಾತ ಮತ್ತು ಹನುಮಾನ್‌ ಚಾಲೀಸಾ ಮೊಳಗಿದೆ. ಆಜಾನ್​ ವರ್ಸಸ್​ ಸುಪ್ರಭಾತ ವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಸರ್ಕಾರ, ಲೌಡ್ ಸ್ಪೀಕರ್ ಬಳಸುವವರು ಅನುಮತಿ ಪಡೆಯುವುದು ಕಡ್ಡಾಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್​ ಮೀರುವಂತಿಲ್ಲ ಎಂದು ಆದೇಶ ಹೊರಡಿಸಿದೆ.

ಧಾರ್ಮಿಕ ಕೇಂದ್ರಗಳು ಮಾತ್ರವಲ್ಲದೆ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಸಭೆ, ಸಮಾರಂಭಗಳಿಗೂ ಈ ನಿಯಮ ಅನ್ವಯ. ಧ್ವನಿವರ್ಧಕದ ಶಬ್ದ ಒಂದು ಡೆಸಿಬಲ್​ ಮೀರುವಂತಿಲ್ಲ, ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಸುಪ್ರೀಂ ಕೋರ್ಟಿನ ತೀರ್ಪಿನಂತೆ ಎಲ್ಲರೂ ನಡೆದುಕೊಳ್ಳಬೇಕು. ಧ್ವನಿವರ್ಧಕ ಬಳಸಲು 15 ದಿನ ಮೊದಲೇ ಅನುಮತಿ ಪಡೆಯಬೇಕು ಎಂದು ಆದೇಶದಲ್ಲಿ ಸರ್ಕಾರ ಉಲ್ಲೇಖಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು