5:00 PM Monday6 - October 2025
ಬ್ರೇಕಿಂಗ್ ನ್ಯೂಸ್
ಹರ್ಷಿಕಾ ಪೂಣಚ್ಚ – ಭುವನ್ ದಂಪತಿ ಮಗುವಿನ ಮೊದಲ ವರ್ಷದ ಹುಟ್ಟುಹಬ್ಬ: ಹರಿದು… Madikeri | ವಿರಾಜಪೇಟೆ: ಹೆಂಡತಿ ಜತೆ ಜಗಳವಾಡಿ ಮನೆಬಿಟ್ಟು ತೆರಳಿದ್ದ ವ್ಯಕ್ತಿ ಶವವಾಗಿ… ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ

ಇತ್ತೀಚಿನ ಸುದ್ದಿ

ಮೈಲಾರ ಧರ್ಮದರ್ಶಿ ಭವಿಷ್ಯ ಸುಳ್ಳು ಎನ್ನುತ್ತಾರೆ ರಾಮಪ್ಪಜ್ಜ:ಗೊರವಯ್ಯ ಬದಲು ಶಾಸ್ತ್ರ ಹೇಳಿ ಪೇಚಿಗೆ ಸಿಲುಕಿದ ವೆಂಕಪ್ಪಯ್ಯ ಒಡೆಯರ್ 

05/08/2021, 14:02

ಹಾವೇರಿ(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಪೂರ್ಣಗೊಳಿಸುವುದಿಲ್ಲ. 5-6 ತಿಂಗಳ ಬಳಿಕ ಗಡ್ಡದಾರಿಯೊಬ್ಬರು ಸಿಎಂ ಆಗುತ್ತಾರೆ ಎಂದು ಮೈಲಾರದ ಮೈಲಾರೇಶ್ವರ ದೇವರ ಪ್ರಧಾನ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಹೇಳಿರುವ ಭವಿಷ್ಯ ಶುದ್ಧ ಸುಳ್ಳು. ಮುಜರಾಯಿ ಇಲಾಖೆ ಅವರ ಮೇಲೆ ಕ್ರಮಕೈಗೊಳ್ಳಬೇಕೆಂದು ಮೈಲಾರದ ಕಾರ್ಣಿಕ ನುಡಿಯುವ ಗೊರವಯ್ಯ ರಾಮಪ್ಪಜ್ಜ ಹೇಳಿದ್ದಾರೆ.

ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಪೂರ್ಣಗೊಳಿಸುತ್ತಾರೆ. ಸುಳ್ಳು ಹೇಳುತ್ತಿರುವ ವೆಂಕಪ್ಪಯ್ಯ ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದರು.

ಮೈಲಾರೇಶ್ವರ ದೇವರ ಕಾರ್ಣಿಕವನ್ನು ವರ್ಷಕ್ಕೊಮ್ಮೆ ಗೊರವಯ್ಯನವರು ನುಡಿಯುವುದು ಕ್ಷೇತ್ರದಲ್ಲಿ ಹಿಂದಿನಿಂದಲೂ ನಡೆದು ಬಂದ ಪದ್ಧತಿ. 11 ದಿನ ಕಠಿಣ ಉಪವಾಸ ಮಾಡಿ ಭರತ ಹುಣ್ಣಿಮೆಯ ಸಂದರ್ಭದಲ್ಲಿ ರಥ ಸಪ್ತಮಿಯ ದಿನ ಮೈಲಾರೇಶ್ವರನ ಬಿಲ್ಲನ್ನು ಏರಿ ಮೈಲಾರ ಲಿಂಗೇಶ್ವರ ದೇವರು ಕೊಟ್ಟ ವಾಣಿಯನ್ನು ಕಾರ್ಣಿಕವಾಗಿ ನಾನೇ ನುಡಿಯುತ್ತೇನೆ. ನಾನು ಏನು ಕಾರ್ಣಿಕ ನುಡಿದಿರುತ್ತೇನೆ ಎಂದು ನನಗೆ ಗೊತ್ತಿರುವುದಿಲ್ಲ. ಅರ್ಧ ತಾಸಿನ ಬಳಿಕ ವಿಷಯ ತಿಳಿದುಕೊಳ್ಳುತ್ತೇನೆ ಎಂದರು.

ಪ್ರತಿ ವರ್ಷ ನಡೆಯುವ ಕಾರ್ಣಿಕಕ್ಕೆ ಬಹಳ ಮಹತ್ವವಿದೆ. ಆದರೆ ಇತ್ತೀಚೆಗೆ ವೆಂಕಪ್ಪಯ್ಯ ಒಡೆಯರ್ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ಆದುದರಿಂದ ಮುಜರಾಯಿ ಇಲಾಖೆ ಅವರು ನೀಡಿದ ಹೇಳಿಕೆ ಅಧಿಕೃತವಲ್ಲ ಎಂದು ಅದೇಶ ಹೊರಡಿಸಬೇಕೆಂದು ಅವರು ಒತ್ತಾಯಿಸಿದರು.

ದೇವಸ್ಥಾನದ ಬಾಬುದಾರ ನಿಂಗಪ್ಪ ಜಜ್ಜೂರಿ ಮಾತನಾಡಿ, ವೆಂಕಪ್ಪಯ್ಯನವರಿಗೆ ಭವಿಷ್ಯ ಹೇಳುವ ಗೀಳಿದ್ದರೆ ಧರ್ಮದರ್ಶಿ ಹುದ್ದೆ ಬಿಟ್ಟು ಎಲ್ಲದರು ಬೋರ್ಡ್ ಹಾಕಿಕೊಂಡು ಭವಿಷ್ಯ ಹೇಳಲಿ. ಪ್ರಚಾರಕೋಸ್ಕರ ಸುಳ್ಳು ಹೇಳುವುದು ಬೇಡ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಹೀಗೆ ಸುಳ್ಳು ಹೇಳಿದ್ದಾರೆ. ಅವರು ಕೊಟ್ಟ ಬೆಳ್ಳಿಯ ಹೆಲಿಕಾಪ್ಟರನ್ನು ಮನೆಗೆ ಒಯ್ದಿದ್ದಾರೆ. ಭಕ್ತರು ಪ್ರಶ್ನಿಸಿದ ಬಳಿಕ ದೇವಸ್ಥಾನದಲ್ಲಿ ತಂದು ಇಟ್ಟಿದ್ದಾರೆ. ಇವರು ಹೇಳುವ ಸುಳ್ಳನ್ನು ಮುಜರಾಯಿ ಇಲಾಖೆ ಗಂಭೀರವಾಗಿ ಪರಿಗಣಿಸಿ ಅವರನ್ನು ಧರ್ಮದರ್ಶಿ ಪೀಠದಿಂದ ಉಚ್ಚಾಟಿಸಬೇಕೆಂದು ಆಗ್ರಹಿಸಿದರು.
ಮಾಲತೇಶಪ್ಪ ಡಂಬಳ, ಚಿಕ್ಕಪ್ಪ ಬೂಸಮ್ಮನವರ, ಮಲ್ಲಾಡಿ ಪುಟ್ಟಪ್ಪ, ನಿಂಗರಾಜ ಈಟಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು