3:20 PM Sunday27 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಮೆಕ್ಕೆಜೋಳ ರೈತರ ಪ್ರತಿಭಟನೆ; ಖರೀದಿ ಕೇಂದ್ರಕ್ಕೆ ಒತ್ತಾಯ: ಕಾವೇರಿಯಲ್ಲಿ ಮುಖ್ಯಮಂತ್ರಿ ಸಭೆ

21/11/2025, 18:45

ಬೆಂಗಳೂರು(reporterkarnataka.com): ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದ್ದಾರೆ.
ಸಚಿವರಾದ ಎಚ್. ಕೆ. ಪಾಟೀಲ್, ಕೆ.ಎಚ್. ಮುನಿಯಪ್ಪ, ಶಿವಾನಂದ ಪಾಟೀಲ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.


ಕೃಷಿ ಸಚಿವರಾದ ಚಲುವರಾಯಸ್ವಾಮಿಯವರು ದೆಹಲಿಯಲ್ಲಿದ್ದು ಆನ್ ಲೈನ್ ಮೂಲಕ ಸಭೆಗೆ ಸೇರ್ಪಡೆಗೊಂಡಿದ್ದಾರೆ.
ರಾತ್ರಿ ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿ ಮೆಕ್ಕೆಜೋಳ ರೈತರ ಸಮಸ್ಯೆ ಬಗ್ಗೆ ವಿವರಿಸಿ ನೆರವು ಕೇಳಿರುವುದಾಗಿ ಸಚಿವ ಚಲುವರಾಯಸ್ವಾಮಿಯವರು ಸಭೆಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು