10:46 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಕೊರಗಪ್ಪ ನಾಯ್ಕ ಸಿಂಗೇರಿ ಆಯ್ಕೆ

15/06/2023, 14:09

ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿನ ಶಾಲಾಅಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಶ ಕೊರಗಪ್ಪ ನಾಯ್ಕ ಸಿಂಗೇರಿ ಅವಿರೋಧವಾಗಿ ಆಯ್ಕೆಯಾದರು.
3 ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಂಜೀವ ಮೂಲ್ಯ ಮಜಿ ರವರ ಮಗನ ವಿದ್ಯಾಭ್ಯಾಸ ಮಜಿ ಶಾಲೆಯಲ್ಲಿ ಕೊನೆಗೊಂಡಿದ್ದರಿಂದ ಸರಕಾರದ ನಿಯಮದ ಪ್ರಕಾರ ಅಧ್ಯಕ್ಷ ಸ್ಥಾನ ತೆರವಾದ ಕಾರಣ ಹೊಸ ಅಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಯಿತು.
ಸಂಜೀವ ಮೂಲ್ಯ ಅವರು ತಮ್ಮ ಅವಧಿಯಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರ ಸಹಕಾರದೊಂದಿಗೆ ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಯನ್ನು ಶ್ರೀ ಮಾತಾ ಡವಲಪರ್ಸ್ ಸುರತ್ಕಲ್ ಇವರ ಮೂಲಕ ದತ್ತು ಪಡೆಯುವಂತೆ ಮಾಡಿ ದತ್ತು ಸಂಸ್ಥೆ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಊರ ಸಂಘ-ಸಂಸ್ಥೆ ಗಳ ಸಹಕಾರದೊಂದಿಗೆ ಶಾಲೆಯಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಶಾಲೆಯಲ್ಲಿ ಮಕ್ಕಳ ಗಣನೀಯ ಏರಿಕೆಗೆ ಕಾರಣರಾಗಿದ್ದರು.
ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಶಾಲಾ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಕೊರಗಪ್ಪ ನಾಯ್ಕ ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದರು. ಪ್ರಸ್ತುತ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಹಾಗೂ ಪಿಂಗಾರ ರೈತ ಉತ್ಪಾದಕರ ಸಂಘದ ನಿರ್ದೇಶಕರಾಗಿದ್ದು ಗ್ರಾಮ ಅಭಿವೃದ್ಧಿ ಯೋಜನೆಯ ವೀರಕಂಬ ಒಕ್ಕೂಟದ ನಿಕ್ಕಟಪೂರ್ವ ಅಧ್ಯಕ್ಷರಾಗಿದ್ದರು.
ನೂತನ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಸಮಿತಿ ಎಲ್ಲಾ ಸದಸ್ಯರು ಹಾಗೂ ಕಾರ್ಯದರ್ಶಿ ಶಾಲಾ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು