7:59 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ

31/10/2023, 21:34

ಬಂಟ್ವಾಳ(reporterkarnataka.com): ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು, ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇಟ್ಟಾಗ ಮಾತ್ರ ಶೈಕ್ಷಣಿಕವಾಗಿ ಹಾಗೂ ಭೌತಿಕ ಅಭಿವೃದ್ಧಿಪಡಿಸಲು ಸಾಧ್ಯಗುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಹೇಳಿದರು.
ಅವರು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಜಿ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮುದಾಯದತ್ತ ಕಾರ್ಯಕ್ರಮದ ಶಾಲಾ ಶಿಕ್ಷಕ ರಕ್ಷಕ ಸಭೆಯನ್ನುದ್ದೇಶಿಸಿ ಮಾತನಾಡಿದರು.


ಶಾಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಹಾಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಪೋಷಕರೊಂದಿಗೆ ಮುಕ್ತವಾಗಿ ಚರ್ಚಿಸಿ ಸಲಹೆ ಅಭಿಪ್ರಾಯವನ್ನು ಪಡೆದು ಸದರಿ ವರ್ಷದ ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಚರಿಸುದೆಂದು ಪೋಷಕರ ಒಪ್ಪಿಗೆ ಮೇರೆಗೆ ಶಾಲಾಭಿವೃದ್ಧಿ ಸಮಿತಿಯ ಮೂಲಕ ನಿರ್ಣಯಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಸಿಂಗೇರಿ, ಶಾಲಾ ಶಿಕ್ಷಕರುಗಳಾದ ಶಕುಂತಲಾ ಎಂ. ಬಿ., ಸಂಗೀತಾ ಶರ್ಮಾ ಪಿ. ಜಿ., ಅನುಷಾ, ಮುರ್ಷಿದಾ ಬಾನು, ಮಮತಾ ಮೊದಲಾದವರು ಉಪಸ್ಥಿತರಿದ್ದರು. ಪೋಷಕರ ಪ್ರಶ್ನೆಗಳಿಗೆ ಮಾಹಿತಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ಶಾಲಾಭಿವೃದ್ಧಿಸಮಿತಿಯ ಸದಸ್ಯರುಗಳು ಹಾಜರಿದ್ದರು.ಶಿಕ್ಷಕಿ ಮಮತಾ ಸ್ವಾಗತಿಸಿದರು.ಶಿಕ್ಷಕಿ ಮುರ್ಷಿದಾ ಬಾನು ವಂದಿಸಿದರು. ಶಿಕ್ಷಕಿ ಸಂಗೀತಾ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು