5:52 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮಾಜಿ ಶಾಸಕ ಬಾವಾರಿಂದ 7 ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಲೋಕಾರ್ಪಣೆ

17/05/2021, 18:13

ಸುರತ್ಕಲ್(reporterkarnataka news): ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯಿದೀನ್ ಬಾವಾ ಅವರು ಏಕಕಾಲದಲ್ಲಿ ತಮ್ಮ ಕ್ಷೇತ್ರಾದ್ಯಂತ ಏಳು ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಅನ್ನು ಸೋಮವಾರ ಲೋಕಾರ್ಪಣೆಗೊಳಿಸಿದರು. 

ಎಜೆ ಆಸ್ಪತ್ರೆಯ ಕಾರ್ಡಿಯೋಲಾಜಿಸ್ಟ್ ಡಾ. ಬಿ.ವಿ. ಮಂಜುನಾಥ್ ಅವರು ಉದ್ಘಾಟನೆ ನೆರವೇರಿಸಿದರು. ಬಳಿಕ ಮಾತಾಡಿದ ಅವರು, “ಕೊರೋನಾ ಎರಡನೇ ಅಲೆ ದೇಶದಲ್ಲಿ ಪ್ರಬಲ ಪರಿಣಾಮವನ್ನು ಬೀರುತ್ತಿದೆ. ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಜನರು ಈ ಸಂದರ್ಭದಲ್ಲಿ ಜಾಗರೂಕರಾಗಿರಬೇಕು. ಜನರಿಗೆ ತುರ್ತು ಸಂದರ್ಭದಲ್ಲಿ ಅವಶ್ಯಕತೆ ಇರುವ ಆಕ್ಸಿಜನ್, ಬೆಡ್ ಸಹಿತ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸಲು ಮೊಯಿದೀನ್ ಬಾವಾ ಅವರು ಕೈಗೊಂಡ ಕ್ರಮ ಶ್ಲಾಘನೀಯ. ಮನೆಗಳಲ್ಲಿ ಒಬ್ಬರಿಗೆ ಕೊರೋನಾ ಬಂದರೆ ಅದು ಇತರರಿಗೂ ಹರಡುವ ಸಾಧ್ಯತೆ ಇದ್ದು ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವ ಕೆಲಸವನ್ನು ಇಂತಹ ಕೋವಿಡ್ ಕೇರ್ ಸೆಂಟರ್ ಮಾಡುತ್ತಿದೆ” ಎಂದು ಮಂಜುನಾಥ್ ಹೇಳಿದರು.

ಬಳಿಕ ಮಾತಾಡಿದ ಮೊಯಿದೀನ್ ಬಾವಾ ಅವರು, “ಕೋವಿಡ್ ಕೇರ್ ಸೆಂಟರ್ ಜನರ ಪ್ರಾಣ ಉಳಿಸುವ ನಿಟ್ಟಿನಲ್ಲಿ ನನ್ನ ಸಣ್ಣ ಪ್ರಯತ್ನ. ಇದರಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಬೆರೆಸಬೇಡಿ. ಇಲ್ಲಿ ಯಾವುದೇ ಜಾತಿ ಧರ್ಮದ ವಿಚಾರಕ್ಕೆ ಅವಕಾಶವಿಲ್ಲ. ನನ್ನ ಕ್ಷೇತ್ರದ ಏಳು ಕಡೆಗಳಲ್ಲಿ ಸ್ಥಳೀಯ ಮಸೀದಿ, ಕಮ್ಯುನಿಟಿ ಹಾಲ್, ಸಂಘ ಸಂಸ್ಥೆಗಳು ನೀಡಿದ ಸ್ಥಳದಾನದಲ್ಲಿ ನನ್ನ ವೈಯಕ್ತಿಕ ಖರ್ಚಿನಿಂದ ಬೆಡ್, ಆಕ್ಸಿಜನ್, ವೈದ್ಯರು, ನರ್ಸ್, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಎಲ್ಲವನ್ನೂ ಒದಗಿಸಿದ್ದೇನೆ. ಇಲ್ಲಿ ಬರುವ ಜನರು ಶೀಘ್ರ ಗುಣಮುಖರಾಗಿ ತಂತಮ್ಮ ಮನೆಗಳಿಗೆ ತೆರಳುವಂತಾದರೆ ನನ್ನ ಶ್ರಮ ಸಾರ್ಥಕ. ಸಮಾಜಸೇವೆ ಮಾಡಲು ಅಧಿಕಾರ ಬೇಕೆಂದಿಲ್ಲ. ಹಿಂದಿನಿಂದಲೂ ಜನರ ಸೇವೆಗಾಗಿ ನಾನಿದ್ದೇನೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ನುರಿತ ವೈದ್ಯಕೀಯ ಸೌಲಭ್ಯವಿದ್ದು ತುರ್ತು ಸಂದರ್ಭದಲ್ಲಿ ಸಹಾಯಕ್ಕೆ ಬರಲು ವಾರಿಯರ್ಸ್ ನೇಮಿಸಿದ್ದೇನೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಆಶಯ ವ್ಯಕ್ತಪಡಿಸಿದರು. ಕಾಟಿಪಳ್ಳ ಬದ್ರಿಯಾ ಜುಮಾ ಮಸೀದಿ, ಬೈಕಂಪಾಡಿ ಅಡ್ಕ ಕಮ್ಯುನಿಟಿ ಹಾಲ್, ಬರಾಕ ಇಂಟರ್ ನ್ಯಾಷನಲ್ ಸ್ಕೂಲ್ ಅಡ್ಯಾರ್, ಜೋಕಿಮ್ಸ್ ಸ್ಕೂಲ್ ನೀರ್ ಮಾರ್ಗ, ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಉಳಾಯಿಬೆಟ್ಟು, ಬಾಮಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗುರುಪುರ, ಬಾಜಿ ಮಂಜಿಲ್ ಜೆಎಂ ರೋಡ್ ಗಂಜೀಮಠ ಇತ್ಯಾದಿ ಕಡೆಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಗೊಂಡಿದೆ.

ಕಾಟಿಪಳ್ಳ ಜಮಾತ್ ಅಧ್ಯಕ್ಷ ಅಹಮದ್ ಬಾವ, ಸೈಫುಲ್ಲಾ, ಬಶೀರ್ ಅಹಮದ್, ಅಯ್ಯೂಬ್, ಕಾಟಿಪಳ್ಳ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹುಸೈನ್ ಕಾಟಿಪಳ್ಳ, ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಹ್ಯಾರೀಸ್ ಬೈಕಂಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು