9:13 PM Monday26 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ ಗ್ರಾಪಂ ಅಧ್ಯಕ್ಷ

26/01/2026, 20:17

ಗಿರಿಧರ್ ಕೊಂಪುಳಿರ ಮಡಿಕೇರಿ.

info.reporterkarnataka@gmail.com

ಸೋಮವಾರಪೇಟೆ ಸಮೀಪದ ಕಾಜೂರು ಗ್ರಾಮದ ನಿವಾಸಿ ಪುಷ್ಪ ಎಂಬುವವರ ಮನೆಗೆ ಮಧ್ಯರಾತ್ರಿ ಸುಮಾರು 11:40ಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ ಭಸ್ಮವಾಗಿದೆ.
​ಪುಷ್ಪ ಅವರು ತಮ್ಮ ಮೊಮ್ಮಗ ಹರ್ಷಿತ್‌ನೊಂದಿಗೆ ಗಾಢ ನಿದ್ರೆಯಲ್ಲಿದ್ದಾಗ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚರಗೊಂಡ ಪುಷ್ಪ ಅವರು ಅಕ್ಕಪಕ್ಕದವರ ಗಮನಕ್ಕೆ ತಂದಿದ್ದಾರೆ. ಪಕ್ಕದ ಮನೆಯವರಾದ ಐಗೂರು ಗ್ರಾ.ಪಂ. ಅಧ್ಯಕ್ಷರಾದ ವಿನೋದ್‌ ಅವರು, ಮನೆಯೊಳಗೆ ಮಲಗಿದ್ದ ಬಾಲಕ ಹರ್ಷಿತ್‌ನನ್ನು ಹೊರತಂದರು.
​ಸ್ಥಳೀಯರು ಬೆಂಕಿ ನಂದಿಸಲು ಸಾಧ್ಯವಾಗದಿದ್ದಾಗ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಕರೆ ಸ್ವೀಕರಿಸಿದ ಕೇವಲ 20 ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದರು.
​ಈ ಬೆಂಕಿ ಅವಘಡದಿಂದಾಗಿ ಮನೆಯಲ್ಲಿದ್ದ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು