10:28 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವಿದ್ಯಾ

06/08/2023, 11:41

ವಿಟ್ಲ(reporterkarnataka.com): ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ವಿಟ್ಲ ಪೊಲೀಸ್ ಠಾಣೆಯ ಎಸ್ ಐ ವಿದ್ಯಾ ಜೆ. ಕೆ. ಹೇಳಿದರು.
ಅವರು ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ನುಡಿದರು.
ಸಮಾಜದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಉದಾಹರಿಸುತ್ತಾ ಇಂತಹ ಅಮಾನವೀಯ ಕೃತ್ಯಗಳನ್ನು ತಡೆಗಟ್ಟುವಲ್ಲಿ ಸಮಾಜದ ಪ್ರತಿಯೊಬ್ಬರೂ ಸಹಕರಿಸಬೇಕಾದ ಅನಿವಾರ್ಯತೆಯನ್ನು ಹೇಳಿದರು.
ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಸಂವಾದದಲ್ಲಿ ಇವರು ಪೊಲೀಸ್ ನೇಮಕಾತಿ, ತರಬೇತಿ ಬಗ್ಗೆ ಹಾಗೂ ಸಮಾಜ ವಿರೋಧೀ ಕೃತ್ಯಗಳನ್ನು ತಡೆಯಲು ಇರುವ ವಿವಿಧ ಕಾನೂನುಗಳ ಬಗ್ಗೆಯೂ ಸವಿವರ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್. ಡಿ. ಎಂ .ಸಿ ಅಧ್ಯಕ್ಷರಾದ ಶಿವಪ್ರಸಾದ್ ಸೊರಂಪಳ್ಳ, ಹಿರಿಯರಾದ ಮುರುವ ನಡುಮನೆ ಮಹಾಬಲ ಭಟ್ ಹಾಗೂ ಮುಖ್ಯ ಶಿಕ್ಷಕರಾದ ಭುವನೇಶ್ವರ್ ಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಉಮಾನಾಥ ರೈ ಮೇರಾವು , ಹಿರಿಯ ಶಿಕ್ಷಕಿ ಲತಾ ಯು ಉಪಸ್ಥಿತರಿದ್ದರು.
ಪೋಷಕ ಹಾಗೂ ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶಿಕ್ಷಕ ಸುಧೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು