10:17 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಮಕ್ಕಳಿಗೆ ಮೂಲ ಸಂಸ್ಕೃತಿ ಕಲಿಸಿ ಸ್ವಾಭಿಮಾನದ ಬದುಕು ಕಟ್ಟಲು ಪ್ರೇರೇಪಿಸಿ: ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು

19/03/2024, 15:25

ಬಂಟ್ವಾಳ(reporterkarnataka.com): ಮಕ್ಕಳಿಗೆ ಮೂಲ ಸಂಸ್ಕೃತಿ ಕಲಿಸಿ ಸ್ವಾಭಿಮಾನದ ಬದುಕು ಕಟ್ಟಲು ಪ್ರೆರೇಪಿಸಿ ಎಂದು ಸಾಹಿತಿ ಮಂಚಿ ಕೊಲ್ನಾಡು ಪ್ರೌಢಶಾಲಾ ಶಿಕ್ಷಕಿ ವಿಜಯಲಕ್ಷ್ಮಿ ಕಟೀಲು ಹೇಳಿದರು.
ಅವರು ಭಾನುವಾರ ಬಂಟ್ವಾಳ ಮಂಜುನಾಥಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಡಿ ಯೋಜನೆ ಬಿ ಸಿ ಟ್ರಸ್ಟ್ (ರೀ )ಬಂಟ್ವಾಳ ಇದರ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ “ಹದಿಹರೆಯದ ಮಕ್ಕಳನ್ನು ಸಭ್ಯ ನಾಗರಿಕರಗಿ ಬೆಳೆಸುವಲ್ಲಿ ಮಹಿಳೆಯರ ಪಾತ್ರ ” ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತಾಡಿದರು.

ಮಕ್ಕಳನ್ನು ಶಾಲೆಯ ತರಗತಿಯಲ್ಲಿ ಪಡೆಯುವ ಅಂಕಗಳ ಹಿಂದೆ ಹೋಗದೆ ಸಂಸ್ಕಾರ, ಸಂಸ್ಕೃತಿಯ ಹಿಂದೆ ಹೋಗುವಂತೆ ಬೆಳೆಸಬೇಕು, ಮಕ್ಕಳಿಗೆ ಮೊದಲು ಮನೆ ಕೆಲಸ ಮಾಡಲು ಕಲಿಸಿ, ಮಕ್ಕಳನ್ನು ಬೇರೆಯವರೊಡನೆ ತುಲನೆ ಮಾಡಲು ಹೋಗಬೇಡಿ, ಪ್ರೀತಿ ವಾತ್ಸಲ್ಯದಿಂದ ದಾರಿ ತಪ್ಪದ ರೀತಿಯಲ್ಲಿ ಬೆಳೆಸಿರಿ ಎಂದು ಮಾತೆಯರಿಗೆ ಕಿವಿಮಾತು ಹೇಳಿದರು.
ಬಂಟ್ವಾಳ ತುಳು ಕೂಟದ ಅಧ್ಯಕ್ಷ ಸುಧರ್ಶನ್ ಜೈನ್ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹಿಳೆ ಸ್ವಾವಲಂಬಿಯಾಗಿ ಸಂಘಟತ್ಮಕವಾಗಿ ಬೆಳೆಯಲು ಜ್ಞಾನವಿಕಾಸ ಕಾರ್ಯಕ್ರಮಗಳು ಸ್ಪೂರ್ತಿ ದಾಯಕ ವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕರ್ನಾಟಕ ಸರಕಾರದ ಬಾಲವನದ ಮಾಜಿ ಅಧ್ಯಕ್ಷರಾದ ಸುಲೋಚನಾ ಜಿ ಕೆ ಭಟ್ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರಲ್ಲಿ ಅರಿವು ಮೂಡಿಸಿ ಮಾತೆಯರನ್ನು ಸ್ವಾವಲಂಬಿಗಳಾಗಿ ಮಾಡಿಸುವ ಉದ್ದೇಶದಿಂದ ಪ್ರಾರಂಭವಾದ ಕೇಂದ್ರವೇ ಮಹಿಳಾ ಜ್ಞಾನವಿಕಾಸ ಕೇಂದ್ರಗಳು. ಈ ಮುಖೇನ ಮಹಿಳೆಯರಿಗೆ ಸೂಕ್ತ ಮಾಹಿತಿ, ತರಬೇತಿ ನೀಡಿ ಸ್ವಾಲಂಬಿ ಜೀವನ ನಡೆಸಲು ಪ್ರೇರೇಪಿಸಿ, ನಾಯಕತ್ವ ಗುಣವನ್ನು ಹೊಂದುವಂತೆ ಮಾಡಿ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡುವ ಕೆಲಸವಾಗುತಿದೆ ಎಂದರು. ಈ ಸಂದರ್ಭದಲ್ಲಿ ಜ್ಞಾನವಿಕಾಸ ತಂಡಗಳಿಗೆ ಹೂ ಗುಚ್ಚ ತಯಾರಿ, ರಂಗೋಲಿ, ಜಾನಪದ ನೃತ್ಯ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು, ಬಂಟ್ವಾಳ ಎಸ್ ವಿ ಎಸ್ ಶಾಲಾ ಶಿಕ್ಷಕಿ ಪೂರ್ಣಿಮಾ ಸ್ಪರ್ಧ ತೀರ್ಪುಗಾರರಾಗಿ ಸಹಕರಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕಿನ ಅತ್ಯುತ್ತಮ ಜ್ಞಾನವಿಕಾಸ ಕೇಂದ್ರಗಳನ್ನು ಗುರುತಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಶಿಶು ಅಭಿವೃದ್ಧಿ ಕಲ್ಯಾಣ ಇಲಾಖೆ ವಿಟ್ಲದ ನಿವೃತ ಯೋಜನಾಧಿಕಾರಿ ಸುಧಾ ಜೋಶಿ, ಉಪಸ್ಥಿತರಿದ್ದರು. ಜ್ಞಾನವಿಕಾಸ ಸದಸ್ಯರಾದ ಜಯಲಕ್ಷ್ಮಿ, ಸರೋಜ ಪ್ರಾರ್ಥಿಸಿ, ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾದವ ಗೌಡ ಪ್ರಸ್ಥವಿಕದೊಂದಿಗೆ ಸ್ವಾಗತಿಸಿ, ಜ್ಞಾನವಿಕಾಸ ಸಮನ್ವಯಧಿಕಾರಿ ಕಮಲಾಕ್ಷಿ ವಂದಿಸಿ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮ ನೀರೂಪಿಸಿದರು. ವಲಯ ಮೇಲ್ವಿಚಾರಕಿಗಳಾದ ಅಶ್ವಿನಿ, ರೂಪ, ತಾಲೂಕು ಕೃಷಿ ಅಧಿಕಾರಿ ಜನಾರ್ಧನ್, ಆಂತರಿಕ ಲೆಕ್ಕ ಪರಿಶೋಧಕ ರಾಜೇಶ್ ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು