8:08 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಕ್ಕಳಿಗೆ ಶಿಕ್ಷಣ ಜತೆಗೆ ಸಂಸ್ಕಾರ ನೀಡಿದರೆ ಸಮಾಜದ ಅಭಿವೃದ್ಧಿ ಸಾಧ್ಯ: ಪತ್ರಕರ್ತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

09/03/2022, 09:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಹಿಂದುಳಿದ ಮೊರಾರ್ಜಿ ವಸತಿ ಶಾಲೆ (ಪರಿಶಿಷ್ಟ ಜಾತಿ) ಹಾಗೂ ಮೊರಾರ್ಜಿ ವಸತಿ ಶಾಲೆ (ಬಿಸಿ) ಸಂಯುಕ್ತಾಶ್ರಯದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಹಾಗೂ ಅಭಿನಂದಿಸುವ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಂಕರಗೌಡ ಪಾಟೀಲ್ ಮಾತನಾಡಿ, ಸಮಾಜದಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಿದಾಗ ತನ್ನಲ್ಲಿರುವ ಪ್ರತಿಭೆ ಹೊರಹಾಕಿದಾಗ ಮುಂದೆ ಬರಲು ಸಾಧ್ಯ . ಮೊರಾರ್ಜಿ ಶಾಲೆ ಯಾವುದರಲ್ಲಿ  ಕಮ್ಮಿ ಇಲ್ಲ. ಖಾಸಗಿ ಶಾಲೆಯನ್ನು ಮೀರಿಸಿದ್ದು, ಇಂದು ಶಾಲೆಯ ಮಕ್ಕಳು ಪಿಎಸ್ಐ , ಡಾಕ್ಟರ್, ಯೋಧರು,ಅಧಿಕಾರಿಗಳು ಆಗಿದ್ದಾರೆ. ಆದ್ದರಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಚೆನ್ನಾಗಿ ವಿದ್ಯಾಭ್ಯಾಸ ಜೀವನದಲ್ಲಿ ಮುಂದೆ ಬನ್ನಿ  ಎಂದು ಹೇಳಿದರು.

ಪಾಲಕರ ಪ್ರತಿನಿಧಿಯಾಗಿ ಪತ್ರಕರ್ತ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಮಾತನಾಡಿ, ಸಮಾಜದಲ್ಲಿ ಮಕ್ಕಳಿಗೆ ಸರಿಯಾದ ಸಂಸ್ಕಾರ ನೀಡಿದರೆ ಮುಂದೆ ಬರಲು ಸಾಧ್ಯ. ಮಕ್ಕಳನ್ನು ಸರಿಯಾದ ಸಂಸ್ಕಾರ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಿ ಎಂದು ಪಾಲಕರಿಗೆ ಮನವಿ ಮಾಡಿದರು.

ಶಾಲೆಗೆ ಪ್ರತಿಭಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 11 ವರ್ಷ ಮೊರಾರ್ಜಿ ಮೊರಾರ್ಜಿ ಶಾಲೆಯು ಹೆಜ್ಜೆಹಾಕುತ್ತ ಬಂದಿದ್ದು ಸಂತೋಷದ. ವಿಷಯ ಮಕ್ಕಳು ಸರಿಯಾದ ರೀತಿಯಲ್ಲಿ ವಿದ್ಯಾಭ್ಯಾಸ ವಿದ್ಯಾಭ್ಯಾಸ ಮಾಡಿದಾಗ ಅವರ ಬದುಕು ಬಂಗಾರವಾಗುತ್ತದೆ ಎಂದು ಯಮನೂರಪ್ಪ ಗಲಗಿನ ಹೇಳಿದರು.

ಪ್ರಿನ್ಸಿಪಾಲ್ ನಾಗೇಶ್  ಮಾತನಾಡಿ, ವಿದ್ಯಾರ್ಥಿಗಳು ಇನ್ನು ಹೆಚ್ಚಿನ ವಿದ್ಯಾಭ್ಯಾಸ ಮಾಡಿ ಶಾಲೆಗೆ ಕೀರ್ತಿ ತರಬೇಕು. ತಂದೆ ತಾಯಿಗೆ ಕೀರ್ತಿ ತರಬೇಕು ಎಂದು ಹೇಳಿದರು .

ಉಪನ್ಯಾಸಕರಾದ ಕಲ್ಪಶ್ರೀ,  ಲಕ್ಷ್ಮಿ ಮಾತನಾಡಿ ವಿದ್ಯಾರ್ಥಿಗಳ ಸಾಧನೆ ಬಗ್ಗೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕರೆ ನೀಡಿದರು. 


ಈ ಸಂದರ್ಭದಲ್ಲಿ ಪಾಲಕರ ಪ್ರತಿನಿಧಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಹಾಗೂ ಪ್ರಿನ್ಸಿಪಾಲರಾದ ವೆಂಕೋಬ ದೇವಲಾಪುರ ಹಾಲಾಪುರ ಹಾಗೂ ಗಂಗಪ್ಪ ಅಂಬೇಡ್ಕರ್ ವಸತಿ ಶಾಲೆ ರಂಗಪ್ಪ ಅವರನ್ನು  ಸನ್ಮಾನಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು