6:35 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮಕ್ಕಳು ಶಿಕ್ಷಣದ ಜತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಬೇಕು: ಮುರಿಗೆಣ್ಣ ದೇಸಾಯಿ

16/11/2024, 12:20

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕೆಲಸ ಶಾಲೆ ಮತ್ತು ಮನೆಗಳಲ್ಲಿ ಆಗಬೇಕಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳಸಬೇಕು. ಅವರು ನಮ್ಮ ದೇಶದ ಆಸ್ತಿ ಎಂದು ಮುರಿಗೆಣ್ಣ ದೇಸಾಯಿ ಹೇಳಿದರು.
ಪಟ್ಟಣದ ಸ್ಪಂದನ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಜವಾಹ‌ರ್ ಲಾಲ್ ನೆಹರು ಅವರ ಜಯಂತಿಯ ಅಂಗವಾಗಿ ಅವರ ಭಾವಚಿತಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮಕ್ಕಳ ದಿನಾಚರಣೆ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಪ್ರತಿಯೊಬ್ಬರು ದೇಶದ ಅಭಿವೃದ್ಧಿಯ ಚಿಂತನೆಯನ್ನು ಮಾಡಬೇಕು. ಭವ್ಯ ಭಾರತದ ನಿರ್ಮಾಣಕ್ಕಾಗಿ ಚಿಕ್ಕ ವಯಸ್ಸಿನಲ್ಲಿಯೆ ಮಕ್ಕಳಿಗೆ ದೇಶ ಪ್ರೇಮವನ್ನು ಬೆಳೆಸುವ ಕಾರ್ಯ ಶಿಕ್ಷಕರು ಹಾಗೂ ಪಾಲಕರಿಂದ ಆಗಬೇಕಾಗಿದೆ ಎಂದು ಹೇಳಿದರು.
ಶಾಲಾ ಹಿರಿಯ ಶಿಕ್ಷಕ ರಾಮಣ್ಣ ಹುಗಾರ ಮಾತನಾಡಿ,
ದೇಶ ಕಂಡ ಮಹಾನ್ ವ್ಯಕ್ತಿ ಜವಾಹರಲಾಲ ನೆಹರು. ಅವರು ದೇಶದ ಅಭಿವೃದ್ಧಿಗೆ ತಮ್ಮದೆ ಆದ ಸೇವೆಯನ್ನು ಸಲ್ಲಿಸಿದ್ದಾರೆ. ಮಕ್ಕಳನ್ನು ದೇವರ ರೂಪದಲ್ಲಿ ಕಾಣುತ್ತಿದ್ದರು. ಮಕ್ಕಳ ಮೇಲಿದ್ದ ಅತಿಯಾದ ಪ್ರೀತಿಯಿಂದಾಗಿ ಇಂದು ದೇಶಾದ್ಯಾಂತ ಅವರ ಹುಟ್ಟುಹಬ್ಬವನ್ನು ಮಕ್ಕಳ ದಿನಚಾರಣೆ ಎಂದು ಆಚರಣೆ ಮಾಡುತ್ತಿವೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ, ಸಮಾಜ ಸುಧಾರಕರ, ವಚನಕಾರರು, ಮಹಾನ್ ಸಾಧಕರ ಛದ್ಮವೇಷವನ್ನು ತೊಟ್ಟು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಎಲ್ಲಾ ಮಕ್ಕಳಿಗೆ ನೋಟಬುಕ್ಸ್ ಹಾಗೂ ಪೆನ್ನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರಾದ ಸುಭಾಸ ಪವಾರ, ಶಾರದಾದೇವಿ, ಪ್ರಮೀಳಾ ನೂಲಿನ್, ವರಸಂದ್ಯಾ, ಆಸ್ಮಾ, ಜಯಶ್ರೀ, ಪ್ರಿಯಾಂಕಾ, ಸಂಧ್ಯಾ, ಗೌಸಿಯಾ ಬಾನು, ಪ್ರೇಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು