1:16 PM Friday12 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಮಕ್ಕಳ ಮಾರಾಟ, ಖರೀದಿ: 5 ವರ್ಷ ಜೈಲು ಶಿಕ್ಷೆ; 1 ಲಕ್ಷ ರೂ. ದಂಡ

08/11/2024, 11:08

ಮಂಗಳೂರು (reporterkarnataka.com): ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಎಚ್ಚರಿಕೆ ನೀಡಿದೆ.
ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಮಕ್ಕಳ ರಕ್ಷಣಾ ಘಟಕ ವತಿಯಿಂದ ಮಕ್ಕಳ ಮಾರಾಟ ಅಪರಾಧದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನವೆಂಬರ್ ತಿಂಗಳಲ್ಲಿ ಕಾನೂನು ಬದ್ಧ ದತ್ತುವನ್ನು ಪ್ರೋತ್ಸಾಹಿಸುವ ಸಲುವಾಗಿ ಜಿಲ್ಲೆಯಲ್ಲಿ ದತ್ತು ಮಾಸಾಚರಣೆ ಆಚರಿಸಲಾಗುತ್ತಿದೆ.
ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಮಕ್ಕಳ ರಕ್ಷಣಾ ಘಟಕ ಕಛೇರಿಯ ದೂರವಾಣಿ ಸಂಖ್ಯೆ:0824-2440004 ಅಥವಾ ಮಕ್ಕಳ ಸಹಾಯವಾಣಿ 1098 ಅಥವಾ 112 ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು