8:40 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮಲಗಿದ್ದವರ ಮೇಲೆ ಟ್ರಕ್ ಹರಿದು 4 ಮಂದಿ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

21/09/2022, 17:14

ಹೊಸದಿಲ್ಲಿ(reporterkarnataka.com): ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ರಸ್ತೆ ವಿಭಜಕದಲ್ಲಿ ಮಲಗಿದ್ದ 6 ಮಂದಿಯ ಮೇಲೆ ಅಪರಿಚಿತ ಟ್ರಕ್ ಒಂದು ಹರಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಇತರ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಕರೀಮ್ (52), ಚೋಟೆ ಖಾನ್ಸ್ (25), ಶಾ ಆಲಂ (38) ಮತ್ತು ರಾಹುಲ್ (45) ಮೃತಪಟ್ಟ ನತದೃಷ್ಟರು ಎಂದು ಗುರುತಿಸಲಾಗಿದೆ. ಗಾಯಗೊಂಡ 16 ವರ್ಷದ ಮನೀಶ್ ಮತ್ತು 30 ವರ್ಷದ ಪ್ರದೀಪ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ರಸ್ತೆ ವಿಭಜಕದ ಮೇಲೆ ಮಲಗಿದ್ದ ನಾಲ್ವರು ಸಾವನ್ನಪ್ಪಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ. ಮೃತ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ ಓರ್ವ ಮಾರ್ಗ ಮಧ್ಯೆ ಮೃತಪಟ್ಟಿದ್ದು ಇನ್ನೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಸೀಮಾಪುರಿ ಡಿಟಿಸಿ ಡಿಪೋವನ್ನು ಲಾರಿ ಹಾದು ಹೋಗುವಾಗ  ಈ ದಾರುಣ ಘಟನೆ ನಡೆದಿದ್ದು ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಪ್ರಕರಣವನ್ನು ದಾಖಲಿಸಿಕೊಂಡು ಅಪಘಾತ ನಡೆಸಿ ಪರಾರಿಯಾಗಿರುವ ವಾಹನ ಹಾಗೂ ಚಾಲಕನಿಗಾಗಿ ಶೋಧ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು