10:23 PM Thursday24 - April 2025
ಬ್ರೇಕಿಂಗ್ ನ್ಯೂಸ್
ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನಮುಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ Chamarajanagara | ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಿ: ಗೃಹ… ಉಗ್ರರ ದಾಳಿಗೆ ಬಲಿಯಾದ ಭರತ್ ಭೂಷಣ್ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ತಲಾ… ಕಾರ್ಮಿಕ ಸಚಿವ ಸಂತೋಷ ಲಾಡ್ ಸಾರಥ್ಯ: ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ 178… Bangalore | ಪೆಹಲ್ಗಾಮ್ ನರಮೇಧ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ… Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ… ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ… ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ; ರಾಜಕೀಯ ಮಾಡುವುದಿಲ್ಲ: ಉಪ… Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು…

ಇತ್ತೀಚಿನ ಸುದ್ದಿ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನಮುಕ್ತ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

24/04/2025, 20:15

*ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ: ಸಿ.ಎಂ ಘೋಷಣೆ*

*ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ಸಭೆ ನಿರ್ಣಯ*

ಮಲೈ ಮಹದೇಶ್ವರ(reporterkarnataka.com): ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು…

*ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.

*ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.

*ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.

*ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.

*ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.

*ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.

*ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು