12:26 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ಮಲಪ್ರಭಾ ಜಲಾಶಯ ಸಂಪೂರ್ಣ ಭರ್ತಿ; ಒಂದು ವರ್ಷದವರೆಗೆ ನೀರು ಸಮರ್ಪಕ ಪೂರೈಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

16/10/2024, 10:42

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಉತ್ತಮ ಮಳೆಯಿಂದ ಮಲಪ್ರಭಾ ಜಲಾಶಯ ಮಟ್ಟ ಸಂಪೂರ್ಣ ಭರ್ತಿಯಾಗಿದ್ದು, ಪ್ರತಿವರ್ಷದಂತೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಸವದತ್ತಿ, ಬೈಲಹೊಂಗಲ ತಾಲೂಕುಗಳಿಗೆ ಮಲಪ್ರಭಾ ಜಲಾಶಯದಿಂದ ಕುಡಿಯುವ ನೀರು ಬಿಡುಗಡೆ ಮಾಡಲಾಗುತ್ತಿದೆ. ಬೇಸಿಗೆ ಕಾಲದಲ್ಲಿ ಜನ, ಜಾನುವಾರುಗಳಿಗೆ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಮಲಪ್ರಭಾ ನೀರಾವರಿ ಸಲಹಾ ಸಮಿತಿ ವತಿಯಿಂದ ನವಿಲುತೀರ್ಥ ಅಣೆಕಟ್ಟು ಸ್ಥಳದಲ್ಲಿ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನವಿಲುತೀರ್ಥ ಡ್ಯಾಂ ಉತ್ತರ ಕರ್ನಾಟಕದ ರೈತರ ಜೀವ “ಮಲಪ್ರಭಾ ಜಲಾಶಯ” ಭರ್ತಿಯಾಗಿರುವ ಶುಭ ಸಂದರ್ಭದಲ್ಲಿ ಮಲಪ್ರಭಾ ಜಲಾಶಯಕ್ಕೆ ಗಂಗಾ ಪೂಜೆ ಹಾಗೂ “ಬಾಗಿನ ಅರ್ಪಣೆ” ಸಲ್ಲಿಸುವುದು ನಮ್ಮ ಭಾಗ್ಯ ಎಂದು ನುಡಿದರು.
ವರುಣನ ಕೃಪೆ, ತಾಯಿ ರೇಣುಕಾ ಯಲ್ಲಮ್ಮ ಅನುಗ್ರಹದಿಂದ ಮಲಪ್ರಭಾ ನದಿಗೆ ನಾವೆಲ್ಲ ಬಾಗಿನ ಅರ್ಪಣೆ ಮಾಡುವ ಸೌಭಾಗ್ಯ ಸಿಕ್ಕಿದೆ. ಕಳೆದ ವರ್ಷ ನಾವು ಕಷ್ಟದಲ್ಲಿದ್ದೆವು. ಆದರೂ ಶಕ್ತಿ ಮೀರಿ ರೈತರನ್ನ ಕಾಪಾಡುವ ಕೆಲಸ ಮಾಡಿದ್ದೇವೆ, ಈಗ ಮಲಪ್ರಭೆ ತಾಯಿಯ ಕೃಪೆ ನಮಗೆ ಸಿಕ್ಕಿದೆ ಎಂದರು.
ಬೇಸಿಗೆ ಕಾಲದಲ್ಲಿ ಬಾದಾಮಿ, ರಾಮದುರ್ಗ, ನವಲಗುಂದ ತಾಲೂಕುಗಳ ಜೊತೆಗೆ ಮಲಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೂ ನೀರು ಬಿಡುಗಡೆಗೆ ಜಲಾಶಯದಲ್ಲಿ ನೀರು ಸಂಗ್ರಹಣೆ ಮಾಡಲಾಗಿದೆ. ಈ ಭಾಗದ ಶಾಸಕರ ಆಶಯದಂತೆ ಮುಂದಿನ ದಿನಗಳಲ್ಲಿ ಉದ್ಯಾನವನ, ವೀಕ್ಷಕರಿಗೆ ಆಸನ ಸೇರಿದಂತೆ ಜಲಾಶಯ ಅಭಿವೃದ್ಧಿಪಡಿಸಿ, ಕೆ.ಆರ್.ಎಸ್. ಮಾದರಿಯಲ್ಲಿ ಮಾರ್ಪಾಡು ಮಾಡಲಾಗುವುದು ಎಂದು ಸಚಿವೆ ಹೆಬ್ಬಾಳಕರ ಅವರು ತಿಳಿಸಿದರು.
ಕೆ.ಆರ್.ಎಸ್, ಆಲಮಟ್ಟಿ ಅಣೆಕಟ್ಟುಗಳು ಮಾದರಿಯಲ್ಲಿ ಮಲಪ್ರಭಾ ಜಲಾಶಯ ಸುತ್ತಮುತ್ತ ಪ್ರದೇಶವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಎಲ್ಲ ಶಾಸಕರು ಜನಪ್ರತಿನಿಧಿಗಳು ಶ್ರಮ ವಹಿಸಲಿದ್ದಾರೆ. ನಾಲ್ಕು ಜಿಲ್ಲೆಯ 13 ತಾಲೂಕುಗಳ ಜನರು ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ಈ ಜಲಾಶಯದ ಅವಲಂಬಿತರಾಗಿದ್ದಾರೆ. ಈಗ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜನರು ಸಂತಸದಲ್ಲಿದ್ದಾರೆ ಎಂದು ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ ಅವರು ಹೇಳಿದರು.
ಮಲಪ್ರಭೆಯ ಇಂದಿರಾ ಗಾಂಧಿ ಜಲಾಶಯ ತುಂಬಿ ಹರಿಯುತ್ತಿದೆ. ಎಲ್ಲರೂ ಸಂತಸ ಪಡುವ ವಿಷಯ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಈ ಭಾಗದ ರೈತರಿಗೆ, ಜನಕರುಗಳಿಗೆ ಕುಡಿಯುವ ನೀರಿನ ಯಾವುದೇ ಅಡತಡೆ ಇಲ್ಲ. ಸರ್ಕಾರದಿಂದ ಜಲಾಶಯದ ಇನ್ನಷ್ಟು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಸವದತ್ತಿ ವಿಧಾನಸಭಾ ಮತಕ್ಷೇತ್ರದ ಶಾಸಕ
ವಿಶ್ವಾಸ ವೈದ್ಯ ಅವರು ತಿಳಿಸಿದರು.
ಬಾದಾಮಿ ಶಾಸಕ ಚಿಮ್ಮನಕಟ್ಟಿ, ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸಭೆಯ ಸದಸ್ಯರು, ಮಲಪ್ರಭಾ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ನವಿಲುತೀರ್ಥ ವೃತ್ತದ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ, ನೀರಾವರಿ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
*ನವೀಕೃತ ಪ್ರವಾಸಿಮಂದಿರ ಉದ್ಘಾಟನೆ:*
ಇದಕ್ಕೂ ಮುಂಚೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು, ನವಿಲುತೀರ್ಥದ ನವೀಕೃತ ಪ್ರವಾಸಿ ಮಂದಿರದ ಕಟ್ಟಡವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ, ಬಾದಾಮಿ ಶಾಸಕ ಚಿಮ್ಮನಕಟ್ಟಿ, ಮಲಪ್ರಭಾ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ನವಿಲುತೀರ್ಥ ವೃತ್ತದ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ ಸೇರಿದಂತೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು