8:24 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮಲಾರ್ ಪಲ್ಲಿಯಬ್ಬ ಕೊಲೆ ಪ್ರಕರಣ: ಎಲ್ಲ 5 ಮಂದಿ ಆರೋಪಿಗಳು ದೋಷಿಗಳು; ಶಿಕ್ಷೆಯ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲಯ

01/03/2023, 21:25

ಮಂಗಳೂರು(reporterkarnataka.com): ಪಾವೂರು ಸಮೀಪದ ಮಲಾರ್ ನಲ್ಲಿ ವೃದ್ಧರೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ 5 ಮಂದಿ ಆರೋಪಿಗಳನ್ನು ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಪ್ರಕಟಿಸಿದೆ.

ನ್ಯಾಯಾಧೀಶ ಬಸಪ್ಪ ಬಾಳಪ್ಪ ಜಕಾತಿ, ಶಿಕ್ಷೆಯ ಪ್ರಮಾಣವನ್ನು 2023ರ ಮಾರ್ಚ್ 3ನೇ ತಾರೀಕಿಗೆ ಕಾಯ್ದಿರಿಸಿದ್ದಾರೆ.
ಪಲ್ಲಿಯಬ್ಬ ಎಂಬವರನ್ನು ಮಲಾರ್ ಎಂಬಲ್ಲಿ ಹಣಕ್ಕಾಗಿ ಕತ್ತು ಹಿಸುಕಿ ಕೊಲ್ಲಲಾಗಿತ್ತು ಮತ್ತು ಕುಟುಂಬಸ್ಥರು ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಇದರ ಆಧಾರದಲ್ಲಿ ಪೋಲೀಸರು ತನಿಖೆ ನಡೆಸಿದಾಗ ಕೊಲೆ ಎಂದು ಸಾಬೀತಾಗಿತ್ತು.

ಮಲಾ‌ರ್ ಅಕ್ಷರ ನಗರ ನಿವಾಸಿ ಹಂಝ ಅಬ್ಬಾಸ್ (44), ಮಲಾರ್ ಅರಸ್ತಾನ ಸೈಟ್ ನಿವಾಸಿ ಅಝರುದ್ದೀನ್ (27), ಸಜಿಪನಡು ಕಂಚಿನಡ್ಕಪದವು ನಿವಾಸಿಗಳಾದ ಅಮೀರ್ ಶೇಖ್ ಯಾನೆ ಅಮ್ಮಿ (26), ಅರ್ಫಾಝ್ ಅಬ್ದುಲ್ ರಝಾಕ್ (20) ಹಾಗೂ ಅಥಾವುಲ್ಲ ಯಾನೆ ಅಲ್ತಾಫ್ ಅಪರಾಧಿಗಳು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದ ವಿವರ: ಪಾವೂರು ಗ್ರಾಮದ ಮಲಾರ್‌ನಿಂದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ ನಾಪತ್ತೆಯಾದ ಬಗ್ಗೆ 2020ರ ಅ.29ರಂದು ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಪಲ್ಲಿಯಬ್ಬ ಎಂಬವರ ಮೃತದೇಹವು ಇರಾ ಗ್ರಾಮದ ಪದವು ಬಳಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಹಣದ ವಿಚಾರದಲ್ಲಿ ಇವರನ್ನು ವ್ಯವಸ್ಥಿತವಾಗಿ ಹತ್ಯೆಗೈದು ಹೂತು ಹಾಕಲಾಗಿತ್ತು ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿತ್ತು.
ಈ ಬಗ್ಗೆ ಕೊಣಾಜೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು