ಇತ್ತೀಚಿನ ಸುದ್ದಿ
ಹೆಚ್ಚಿದ ಮಳೆರಾಯನ ಅಬ್ಬರ : ಜುಲೈ 12ರ ವರೆಗೆ ದ.ಕ. ಸೇರಿದಂತೆ ಹಲವೆಡೆ ರೆಡ್ ಅಲರ್ಟ್ ಘೋಷಣೆ
11/07/2021, 14:20
ಬೆಂಗಳೂರು(reporterkarnataka.com)
ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ.
ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರ್ನಾಟಕ ಹವಾಮಾನ ವರದಿ: ಮುಂದಿನ 4 ದಿನ ಅಬ್ಬರಿಸಲಿದೆ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಜುಲೈ 15ರ ತನಕ ಮಳೆ ಮುಂದುವರೆಯಲಿದೆ. ಸಮುದ್ರದಲ್ಲಿ 3.3 ಮೀಟರ್ ತನಕ ಅಲೆಗಳು ಏಳುವ ನಿರೀಕ್ಷೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಮುಂಗಾರು ಪ್ರಭಾವ; ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾರೀ ಮಳೆ ಸೂಚನೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ.