12:27 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಳೆ ಬಂದ್ರೆ ನರಕಯಾತನೆ ಅನುಭವಿಸುವ  ಜನರು !: ಕ್ಯಾರೆ ಎನ್ನದ ಅಧಿಕಾರಿಗಳು; ಜನರ ಗೋಳು ಕೇಳುವವರ್ಯಾರು?

23/07/2021, 08:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಬಳಗನೂರು ಸಮೀಪದ ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದ್ರೆ ಇಡೀ ವಾರ್ಡಿನ ಜನರಿಗೆ ನದಿ ದಾಟುವಂತ ಪರಿಸ್ಥಿತಿ ಎದುರಾಗುತ್ತದೆ.

ಗ್ರಾಮಗಳ ಸುರಕ್ಷತೆಗಾಗಿ ಸರಕಾರದಿಂದ ಸಾಕಷ್ಟು ಯೋಜನೆಗಳಿದ್ದರೂ ಅದು ಹೇಗೆ ಬಳಕೆಯಾಗುತ್ತಿಲ್ಲ ಎನ್ನುವುದಕ್ಕೆ ಇದು ಸಣ್ಣ ಉದಾಹರಣೆಯಾಗಿದೆ.


ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದರೆ ವೃದ್ಧರು, ಗರ್ಭಿಣಿಯರು , ಮಕ್ಕಳು ನರಕಯಾತನೆ ಅನುಭವಿಸುತ್ತಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಇದೆಲ್ಲ ಗೊತ್ತಿದ್ದರೂ ಗೊತ್ತಿಲ್ಲದಂತೆ ಸುಮ್ಮನಾಗಿದ್ದಾರೆ. ಜನರ ಕೂಗು ಕೇಳುವವರ್ಯಾರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಗೌಡನಬಾವಿ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರು ಇದರ ಬಗ್ಗೆ ಗಮನಹರಿಸುವ ಅಗತ್ಯವಿದೆ. ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಸ್ಥಳೀಯ ಗ್ರಾಮದ ಸಮಸ್ಯೆಯನ್ನು ಬಗೆಹರಿಸುವ ಮೂಲಕ ನರಕಯಾತನೆ ಅನುಭವಿಸುತ್ತಿರುವ ತಿಪ್ಪಯ್ಯ ಸ್ವಾಮಿ ಸಾಲಿಮಠ ಅವರ ವಾರ್ಡಿನ ನೀರನ್ನು ಹೋಗುವುದಕ್ಕೆ ಅನುಕೂಲ ಮಾಡಿ ಆ ವಾರ್ಡಿನ ಗ್ರಾಮದ ಜನರಿಗೆ ದಾರಿದೀಪ ವಾಗಬೇಕೆಂದು ವಾರ್ಡಿನ ಜನರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಇದನ್ನು ಯಾವಾಗ ಕಾರ್ಯರೂಪಕ್ಕೆ ತರುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು