2:03 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಮಳೆ ಹಾನಿಗೆ ಸ್ಪಂದಿಸದ ಉಸ್ತುವಾರಿ ಸಚಿವ ಮುನಿರತ್ನ ಅವರನ್ನು ಹುಡುಕಿಕೊಡಿ: ರೈತ ಸಂಘ

20/10/2021, 21:03

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸದೆ ನಾಪತ್ತೆಯಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರನ್ನು ಹುಡುಕಿಕೊಟ್ಟು ಮಳೆ ಆರ್ಭಟಕ್ಕೆ ನಾಶವಾಗಿರುವ ಪ್ರತಿ ಎಕರೆ ವಾಣಿಜ್ಯ ಬೆಳೆಗೆ 5 ಲಕ್ಷ ಪರಿಹಾರ ನೀಡಬೇಕೆಂದು ರೈತ ಸಂಘ ಆಗ್ರಹಿಸಿದೆ.

ತೋಟಗಾರಿಕೆ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಉಪ ನಿರ್ದೇಶಕರ ಮೂಲಕ ಸರ್ಕಾರಕ್ಕೆ ಮನವಿ ನೀಡಲಾಯಿತು.

ಜಿಲ್ಲೆಯ ಗಂಧ ಗಾಳಿ ಗೊತ್ತಿಲ್ಲದ ಶೋಕಿಗಾಗಿ ಉಸ್ತುವಾರಿ ಸಚಿವರ ಸ್ಥಾನ ಪಡೆದು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಜೊತೆಗೆ ರೈತರ ಕಷ್ಟಗಳಿಗೆ ಸ್ಪಂದಿಸದ ಉಸ್ತುವಾರಿ ಸಚಿವರನ್ನು ಹುಡುಕಿಕೊಟ್ಟವರಿಗೆ ಒಂದು ಎಕರೆ ಕೃಷಿ ಜಮೀನು ಬಹುಮಾನ ನೀಡುತ್ತೇವೆಂದು ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಘೋಷಣೆ ಮಾಡಿದರು . ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ಅವರು,ಜಿಲ್ಲಾದ್ಯಂತ ಸಾವಿರಾರು ಹೆಕ್ಟೇರ್‌ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಖಾಸಗಿ ಸಾಲ ಮಾಡಿ ಬೆಳೆದಿರುವ ಟೊಮೇಟೊ ಕ್ಯಾಪ್ಪಿಕಂ , ಆಲೂಗಡ್ಡೆ, ಹೂ ಬೆಳೆಗಳು ಸಮೃದ್ಧವಾಗಿ ಬೆಳೆದು ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿದ್ದರೂ ಇತ್ತೀಚೆಗೆ ಸುರಿಯುತ್ತಿರುವ ಕುಂಭದೋಣ ಮಳೆಗೆ ಸಂಪೂರ್ಣವಾಗಿ ಬೆಳೆ ನಾಶವಾಗಿ ಹಾಕಿದ ಬಂಡವಾಳ ಕೈಗೆ ಸಿಗದೆ ಸಾಲಕ್ಕೆ ಸಿಲುಕಿ ಸ್ವಾಭಿಮಾನದ ಬದುಕಿಗೆ ಅಂತ್ಯ ಹೇಳುವ ಪರಿಸ್ಥಿತಿಯಲ್ಲಿರುವ ರೈತರ ಸಮಸ್ಯೆಗೆ ಸ್ಪಂದಿಸಿ ಸರ್ಕಾರದ ಮೇಲೆ ಒತ್ತಡ ಹಾಕಿ ಸೂಕ್ತ ಪರಿಹಾರ ಕೊಡಿಸಬೇಕಾದ ಉಸ್ತುವಾರಿ ಸಚಿವರು ನಾಪತ್ತೆಯಾಗಿದ್ದಾರೆ. ಬೆಂಗಳೂರಿನ ಜೀವನಕ್ಕೆ ಹೊಂದಿಕೊಂಡು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಅರಿವಿಲ್ಲದ ಉಸ್ತುವಾರಿ ಸಚಿವರು ಬಿಜೆಪಿ ಕಾರ್ಯಕ್ರಮಗಳಿಗೆ ಸೀಮಿತವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು .

ಮಹಿಳಾ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ , ವ್ಯವಸಾಯ ಮನೆ ಮಕ್ಕಳೆಲ್ಲಾ ಉಪವಾಸ ಸಾಯ ಎಂಬ ಗಾದೆಯಂತೆ ಬೆಲೆಯಿದ್ದರೆ ಬೆಳೆಯಿಲ್ಲ . ಬೆಳೆಯಿದ್ದರೆ ಬೆಲೆಯಿಲ್ಲದಂತಾಗಿದೆ ರೈತರ ಬದುಕು . ಮಾರುಕಟ್ಟೆಯಲ್ಲಿ ಉತ್ತಮವಾದ ಬೆಲೆಯಿದ್ದರೂ ತೋಟದಲ್ಲಿ ಬೆಳೆಯಿಲ್ಲದೆ ಇರುವ ಬೆಳೆ ನೂರು ವರ್ಷಗಳು ಕಂಡುಕಾಣದ ರೋಗಗಳು ಮೂರು ವರ್ಷಗಳಿಂದ ರೈತರನ್ನು ನಿದ್ದೆಗೆಡಿಸುತ್ತಿದ್ದರೂ ಸಮಸ್ಯೆಗೆ ಪರಿಹಾರ ಕೊಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆಂದು ಆರೋಪ ಮಾಡಿದರು . ಅತಿವೃಷ್ಟಿ ಅನಾವೃಷ್ಟಿ ಪ್ರಕೃತಿ ವಿಕೋಪಗಳ ಜೊತೆಗೆ ಇತ್ತೀಚೆಗೆ ಸುರಿಯುತ್ತಿರುವ ಮುಂಗಾರು ಮಳೆ ಆರ್ಭಟಕ್ಕೆ ಜಿಲ್ಲಾದ್ಯಂತ ಸಾವಿರಾರು ಹೆಕ್ಟೇರ್ ಬೆಳೆ ನಾಶವಾಗಿ ರೈತರು ಖಾಸಗಿ ಸಾಲಕ್ಕೆ ಸಿಲುಕಿದ್ದರೂ ಸರ್ಕಾರ ಹಾಗೂ ಜನಪ್ರತಿನಿಧಿಗಳು , ಅಧಿಕಾರಿಗಳು ರೈತರ ಕಷ್ಟಕ್ಕೆ ಸ್ಪಂದಿಸದೆ ನಾಪತ್ತೆಯಾಗಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದರು . 

ಈ ಕೂಡಲೇ ಸರ್ಕಾರ ಜಿಲ್ಲೆಯ ರೈತರ ಬೆಳೆನಷ್ಟದ ಅಂಕಿಅಂಶಗಳ ಮೂಲಕ ವರದಿ ತರಿಸಿ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಸಭೆ ನಡೆಸಿ ನಷ್ಟವಾಗಿರುವ ರೈತರ ತೋಟಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ನೀಡಿ ಪ್ರತಿ ಎಕರೆಗೆ 5 ಲಕ್ಷ ಪರಿಹಾ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ನಿಲ್ಲಬೇಕೆಂದು ಆಗ್ರಹಿಸಿದರು . ಮನವಿ ಸ್ವೀಕರಿಸಿ ಮಾತನಾಡಿದ ಉಪನಿರ್ದೇಶಕರಾದ ಗಾಯಿತ್ರಿ ಅವರು , ಜಿಲ್ಲಾದ್ಯಂತ ಸಾವಿರಾರು ಹೆಕ್ಟೇರ್‌ ಬೆಳೆ ನಾಶವಾಗಿದೆ . ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಸಲ್ಲಿಸಿ ಪರಿಹಾರ ಕಲ್ಪಿಸುವ ಭರವಸೆ ನೀಡಿದರು . ಹೋರಾಟದಲ್ಲಿ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ , ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ , ಮಂಗಸಂದ್ರ ತಿಮ್ಮಣ್ಣ ಮಂಗಸಂದ್ರ ನಾಗೇಶ್ , ಕುವಣ್ಣ , ಅಶ್ವತ್ಥಪ , ವೆಂಕಟೇಶಪ್ಪ , ಮೂರಂಡಹಳ್ಳಿ ಶಿವಾರೆಡ್ಡಿ , ಚಂದ್ರಪ್ಪ ಮುಂತಾದವರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು