3:12 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಿದ್ದತೆ ಪರಿಶೀಲನೆ

05/12/2022, 21:50

ಚಾಮರಾಜನಗರ(reporterkarnataka.com):ಚಾಮರಾಜನಗರ ಜಿಲ್ಲೆಗೆ ಡಿಸೆಂಬರ್ 12ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿಂದು ವಸತಿ, ಮೂಲಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳ ಸಭೆ ನಡೆಸಿದರು.

ಮುಖ್ಯಮಂತ್ರಿಯವರು ಡಿಸೆಂಬರ್ 12ರಂದು ಚಾಮರಾಜನಗರ, ಹನೂರು ಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಲೆ ಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಿ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರಾದ ಆರ್. ನರೇಂದ್ರ ಅವರೊಂದಿಗೆ ಮಹದೇಶ್ವರ ಬೆಟ್ಟದ ನಾಗಮಲೈ ಭವನ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕಾರ್ಯಕ್ರಮ ಆಯೋಜನೆ ಸಂಬಂಧ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.


ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮವು ಅಚ್ಚುಕಟ್ಟಾಗಿ ನೆರವೇರಬೇಕು. ಮುಖ್ಯ ರಸ್ತೆಗಳು, ಮಾರ್ಗಗಳನ್ನು ಸಿದ್ದಪಡಿಸಬೇಕು, ವಿವಿಧೆಡೆ ಗುಂಡಿಬಿದ್ದಿರುವ ರಸ್ತೆಗಳನ್ನು ಸರಿಪಡಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪೂರ್ಣವಾಗಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಯವರು ಭೇಟಿ ನೀಡಲಿದ್ದಾರೆ. ಪ್ರಾಧಿಕಾರದ ಸಭೆ ನಡೆಸಲಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ಹೆಲಿಪ್ಯಾಡ್ ರಸ್ತೆಯನ್ನು ಸರಿಪಡಿಸಬೇಕು. ಹನೂರು, ಚಾಮರಾಜನಗರ ಪಟ್ಟಣಗಳಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿರುವ ಹಿನ್ನಲೆಯಲ್ಲಿ ಕುಡಿಯುವ ನೀರು, ಶಾಮಿಯಾನ ಇನ್ನಿತರ ವ್ಯವಸ್ಥೆಗಳು ಸಮರ್ಪಕವಾಗಿ ಇರಬೇಕೆಂದು ಸಚಿವರು ತಿಳಿಸಿದರು.
ಮಲೆ ಮಹದೇಶ್ವರ ಕ್ಷೇತ್ರದಲ್ಲಿ ನಿರ್ಮಾಣವಾಗುತ್ತಿರುವ 108 ಅಡಿ ಎತ್ತರದ ಮಹದೇಶ್ವರ ಪ್ರತಿಮೆ ಕಾರ್ಯ ತ್ವರಿತವಾಗಿ ಆಗಬೇಕು. ಒಳ ಚರಂಡಿ ಕಾಮಗಾರಿಯು ಸಹ ವೇಗಗತಿಯಲ್ಲಿ ಆಗಬೇಕು ಎಂದು ಸಚಿವರು ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಆರ್. ನರೇಂದ್ರ, ಜಿಲ್ಲಾಧಿಕಾರಿಗಳಾದ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ, ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರಾದ ಎಸ್. ಕಾತ್ಯಾಯಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಂದರ್‍ರಾಜ್, ಡಿ.ಸಿ.ಎಫ್ ಸಂತೋಷ್‍ ಕುಮಾರ್ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಗೂ ಮೊದಲು ಸಚಿವರು ಹೆಲಿಪ್ಯಾಡ್, ಮುಡಿಕಟ್ಟೆ, ದಾಸೋಹ ಭವನ, ಸಾಲೂರು ಮಠದ ರಸ್ತೆಗೆ ಭೇಟಿ ನೀಡಿ ಪರಿಶೀಲಿಸಿದರು.

ಒಳ ಚರಂಡಿ ನಿರ್ಮಾಣ ಕಾಮಗಾರಿ ಘಟಕಕ್ಕೂ ಭೇಟಿ ನೀಡಿ ಪರಿಶೀಲಿಸಿದರು. ಕ್ಷೇತ್ರದ ದೀಪದಗಿರಿ ಒಡ್ಡುವಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಮಹದೇಶ್ವರರ ಪ್ರತಿಮೆ ಕಾರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿಮೆ ಕೆಳಭಾಗದಲ್ಲಿ ಧ್ಯಾನ ಕೇಂದ್ರ ಸೇರಿದಂತೆ ಇತರೆ ಕೆಲಸಗಳನ್ನು ಪೂರ್ಣಗೊಳಿಸಬೇಕು. ಜನವರಿ 15 ರೊಳಗೆ ಪ್ರತಿಮೆ ಕೆಲಸ ಸಂಪೂರ್ಣವಾಗಬೇಕೆಂದು ಸಚಿವರು ಸೂಚನೆ ನೀಡಿದರು.

ಮಲೆ ಮಹದೇಶ್ವರ ಬೆಟ್ಟದ ಭೇಟಿಯ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಹನೂರು ಪಟ್ಟಣಕ್ಕೆ ಆಗಮಿಸಿ ಮುಖ್ಯಮಂತ್ರಿಗಳ ಕಾರ್ಯಕ್ರಮ ಆಯೋಜನೆ ಸಂಬಂಧ ಮಲೆ ಮಹದೇಶ್ವರ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿದರು. ಹೆಲಿಪ್ಯಾಡ್ ಸ್ಥಳವನ್ನು ಸಹ ವೀಕ್ಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು