4:39 PM Sunday16 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಮಳೆ ನೀರು ಕೊಯ್ಲು ಕಾರ್ಯಾಗಾರ: ಉದಯ ವಾಣಿ- ಮಂಗಳೂರು ಮಹಾನಗರಪಾಲಿಕೆ ಸಾಥ್

31/05/2022, 14:00

ಚಿತ್ರ/ವರದಿ ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಉದಯವಾಣಿ ದಿನ ಪತ್ರಿಕೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಲ್ಲಿ ಮಳೆ ನೀರು ಕೊಯಿಲು ಕಾರ್ಯಾಗಾರ ನಗರದ ಪುರಭವನದ ಮಿನಿ ಹಾಲ್ ನಲ್ಲಿ ಸೋಮವಾರ ಜರುಗಿತು.



ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮಳೆ ನೀರು ಕೊಯ್ಲು ಅವಶ್ಯ ಎಂದರು. 

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಂಗು ಗುಂಡಿಗಳ ನಿರ್ಮಾಣ ಸಾಮಾಜಿಕ ಜವಾಬ್ದಾರಿಯಾಗಿದ್ದು, ಯುವ ಪೀಳಿಗೆ ನೀರಿನ ಪ್ರಾಮುಖ್ಯತೆ ಅರಿಯುವುದು ಅಗತ್ಯ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ ಲ್. ಗಂಗಾಧರ್ ಮಾತನಾಡಿ ಮಳೆ ಕೊಯ್ಲು ಮಾಡುದರಿಂದ ನೀರಿನ ಉಳಿತಾಯ ಮಾತ್ರವಲ್ಲ, ಅಂತರ್ಜಾಲ ಮಟ್ಟ ಹಾಗೂ ನೀರಿನ ಒರತೆ ಹೆಚ್ಚುತ್ತದೆ.ಎಂದು ಹೇಳಿದರು.

ಉದಯವಾಣಿ ಮಂಗಳೂರು ವಿಭಾಗದ ಜಾಹೀರಾತು ಮುಖ್ಯಸ್ಥ ರವಿಶಂಕರ್ ಮಿಜಾರ್ ಉಪಸ್ಥಿತರಿದ್ದರು.

ಮಂಗಳೂರು ಸುದ್ಧಿ ವಿಭಾಗದ ಮುಖ್ಯಸ್ಥ ವೇಣು ವಿನೋದ್, ವರದಿಗಾರರಾದ ದಿನೇಶ್ ಇರಾ, ಸಂತೋಷ್ ಕುಮಾರ್, ಕೇಶವ ಕುಂದರ್, ನವೀನ್ ಭಟ್ ಇಲಂತಿಳ,ಛಾಯಾ ಗ್ರಾಹಕ ಸತೀಶ್ ಇರಾ ಪಾಲ್ಗೊಂಡಿದ್ದರು.



ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 100 ಸ್ವಯಂ ಸೇವಕರು ಭಾಗವಹಿಸಿ, ಮಳೆ ನೀರಿನ ಕೊಯ್ಲು ಅಗತ್ಯತೆಯ ಬಗ್ಗೆ ಅರಿತು ಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು