1:52 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಳೆಗಾಲದ ಸಂಭಾವ್ಯ ಅಪಾಯ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆ

30/05/2023, 19:03

ಬಂಟ್ವಾಳ(reporterkarnataka.com): ಮುಂಬರುವ ಮಳೆಗಾಲದ ಸಂದರ್ಭ ಸಂಭಾವ್ಯ ಅಪಾಯಗಳನ್ನು ಎದುರಿಸಲು ಪೂರ್ವತಯಾರಿ ನಡೆಸಿ ಸನ್ನದ್ದರಾಗವಂತೆ ಹಾಗೂ ಮಳೆ ಬರುವವರೆಗೆ ಕುಡಿಯುವ ನೀರಿನ ಸಮಸ್ಯೆಗಳೂ ತಲೆದೋರದಂತೆ ನೋಡಿಕೊಳ್ಳುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದೇ ಸಂದರ್ಭದಲ್ಲಿ ಕುಡಿಯುವ ನೀರಿಗೆ ತೊಂದರೆ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚಿಸಿದರು.
ಬಂಟ್ವಾಳ ಕ್ಷೇತ್ರ ವ್ಯಾಪ್ತಿಯ ಪಿಡಿಒಗಳು, ಗ್ರಾಪಂ ಅಧ್ಯಕ್ಷರು ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ
ಶಾಸಕ ರಾಜೇಶ್ ನಾಯ್ಕ್ ಅವರು ಮಾತನಾಡಿದರು.
ಅಧಿಕಾರಿಗಳು ದೂರವಾಣಿ ಸ್ವಿಚ್ ಆಫ್ ಮಾಡದೆ, ಸದಾ ಜನರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಿದರು.
ಹಾರಿಕೆಯ ಉತ್ತರ ನೀಡಿದ ಕೆಲ ಅಧಿಕಾರಿಗಳನ್ನು ಶಾಸಕರು
ತರಾಟೆಗೆ ತೆಗೆದುಕೊಂಡರು. ಮೇಲಧಿಕಾರಿಗಳ ಜೊತೆ ಮಾತನಾಡಿದರು.
ತಹಸೀಲ್ದಾರ್ ಎಸ್.ಬಿ.ಕೂಡಲಗಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರೊಂದಿಗೆ ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದ ಶಾಸಕರು, ಮಳೆಗಾಲಕ್ಕೂ ಮುನ್ನ ದುರಸ್ತಿಗೊಳಿಸಬೇಕಾದ ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡಗಳು, ಅಪಾಯದ ಸ್ಥಿತಿಯಲ್ಲಿರುವ ಗುಡ್ಡಗಳು, ಹೆದ್ದಾರಿ, ಹೂಳೆತ್ತದ ಚರಂಡಿ, ಸಮಸ್ಯೆ ಉಂಟಾಗುವ ಸನ್ನಿವೇಶಗಳನ್ನು ನಿಭಾಯಿಸುವ ಕುರಿತು ತತ್ ಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿಗೆ ತೊಂದರೆ ಮಾಡಿದವರ ವಿರುದ್ಧ ಕ್ರಮ:
ಮಳೆ ಬರುವವರೆಗೂ ಕುಡಿಯುವ ನೀರಿಗೆ ತೊಂದರೆ ಉಂಟಾಗುತ್ತಿರುವುದನ್ನು ಗಮನಿಸಿ, ಅಗತ್ಯ ಬಿದ್ದಲ್ಲಿ ಟ್ಯಾಂಕರ್ ಮೂಲಕವಾದರೂ ನೀರು ಪೂರೈಸಿ ಎಂದ ಶಾಸಕರು, ಪುಚ್ಚೇರಿ ಡ್ಯಾಂ ನಲ್ಲಿ ನೀರು ಖಾಲಿ ಮಾಡಿ ಸಂಗಬೆಟ್ಟು ಸಹಿತ ಸುತ್ತಮುತ್ತಲಿನ ಜನರ ಕುಡಿಯುವ ನೀರಿಗೆ ತೊಂದರೆ ಉಂಟುಮಾಡಿದವರು ಯಾರು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕುಡಿಯುವ ನೀರಿಗೆ ತೊಂದರೆ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಎಂದು ಹೇಳಿದ ಶಾಸಕರು, ಯಾವುದೇ ಹಂತದಲ್ಲೂ ಸಮಸ್ಯೆ ಉದ್ಭವವಾಗಬಾರದು ಎಂದರು.
ಸಜಿಪ ಏತ ನೀರಾವರಿ ಯೋಜನೆಗೆ ಮೆಸ್ಕಾಂನಿಂದ ನೀರು ಪೂರೈಕೆ ನಿಲ್ಲಿಸಲಾಗಿದೆ ಎಂಬ ದೂರಿನ ಕುರಿತು ಕೂಡಲೇ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಎಂ.ಡಿ. ಅವರ ಜೊತೆ ಶಾಸಕರು ಮಾತನಾಡಿ ಸೂಚನೆ ನೀಡಿದರು.
ಈ ಸಂದರ್ಭ ವಿವರ ನೀಡಿದ ಬಿಇಒ ಮತ್ತು ಸಿಡಿಪಿಒಗಳು, 40 ಅಂಗನವಾಡಿ ಕೇಂದ್ರಗಳು ಮತ್ತು 64 ಶಾಲೆಗಳಲ್ಲಿ ಈಗಿದ್ದ ಸ್ಥಿತಿ ಮುಂದುವರಿದರೆ, ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಬಹುದು ಎಂಬ ಮಾಹಿತಿ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಅಂಗನವಾಡಿ ಶಾಲೆಗಳನ್ನು ಪುನಾರಂಭಗೊಳ್ಳುವುದನ್ನು ಮುಂದಕ್ಕೆ ಹಾಕಬಹುದೇ ಎಂಬ ಕುರಿತು ಮಾತನಾಡುವುದಾಗಿ ತಿಳಿಸಿದರು.

ಕ್ರಮ ಕೈಗೊಳ್ಳಿ:
ಇದೇ ಸಂದರ್ಭ, ಕೆಆರ್ ಡಿಎಲ್ ನವರು 22 ಶಾಲೆಗಳಲ್ಲಿ ಮಳೆ ಹಾನಿ ಕೆಲಸ ಮಾಡಿಲ್ಲ ಎಂದು ಬಿಇಒ ಹೇಳಿದರೆ, 12 ಕಟ್ಟಡಗಳು ಶಿಥಿಲಾವಸ್ಥೆಯಲ್ಲಿವೆ ಎಂದು ಸಿಡಿಪಿಒ ಮಾಹಿತಿ ನೀಡಿದರು. ಇವುಗಳ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲು ಶಾಸಕರು ಸೂಚನೆ ನೀಡಿದರು. ಉಪ್ಪುಗುಡ್ಡೆ ನೀರಿನ ಟ್ಯಾಂಕ್ ಮತ್ತೆ ಮಳೆಗಾಲದಲ್ಲಿ ಬೀಳುವ ಸಾಧ್ಯತೆಯನ್ನು ವಿಎ ಗಮನಕ್ಕೆ ತಂದರು. ಪಾಣೆಮಂಗಳೂರು ಮಿಲಿಟರಿ ಗ್ರೌಂಡ್ ಹಾಗೂ ಇಲ್ಲಿನ ತಗ್ಗು ಪ್ರದೇಶಗಳಲ್ಲಿ ನೆರೆ ಪ್ರತಿ ವರ್ಷವೂ ಬರುತ್ತದೆ, ಆದರೆ ಇಲ್ಲಿರುವ ಸಣ್ಣ ತೋಡುಗಳ ಬದಿಯಲ್ಲಿರುವ ಗಿಡಗಂಟಿಗಳು, ಪೊದೆಗಳನ್ನು ಕಡಿದು ಬಳಿಕ ಹೂಳೆತ್ತುವ ಕಾರ್ಯವನ್ನು ಪುರಸಭಾ ಇಲಾಖೆಯವರು ಮಾಡಬೇಕು ಎಂದು ಶಾಸಕರು ಸೂಚಿಸಿದರು.ಈ ಸಂದರ್ಭ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ತಮ್ಮ ವ್ಯಾಪ್ತಿಯ ಸಮಸ್ಯೆಗಳನ್ನು ಗಮನಕ್ಕೆ ತಂದರು. ಗ್ರಾಮೀಣ ಭಾಗದಲ್ಲಿ ರಸ್ತೆ ಬದಿಯಲ್ಲಿ ರಸ್ತೆ ಕೆಟ್ಟು ಹೋಗುವ ರೀತಿಯಲ್ಲಿ ಅಗೆದು ಕೇಬಲ್ ವಯರ್ ಗಳನ್ನು ಹಾಕಲಾಗುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು