ಇತ್ತೀಚಿನ ಸುದ್ದಿ
ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು
02/12/2024, 23:56
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕಾಫಿನಾಡಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ತೀವ್ರ ಸ್ವರೂಪ ಪಡೆದಿದೆ. ಮೂಡಿಗೆರೆ ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ.
ಚಂಡಮಾರುತದ ಪರಿಣಾಮ ಮೂಡಿಗೆರೆ ತಾಲೂಕಿನ
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಭಾಗದಲ್ಲಿ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ನಗರದಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ
ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ನೆಲೆಸಿತ್ರು.
ಸಂಜೆ ಬಳಿಕ ಮಲೆನಾಡಿನ ಹಲವು ಭಾಗದಲ್ಲಿ ಧಾರಾಕಾರ ಮಳೆ ಸುರಿಯಲಾರಂಭಿಸಿದೆ.
ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕೊಯ್ಲಿಗೆ ಬಂದಿರೋ ಕಾಫಿ ಕಂಡು ಬೆಳೆಗಾರರು ಕಂಗಾಲು ಆಗಿದ್ದಾರೆ. ಡಿಸೆಂಬರ್ ಮಳೆ ಕಾಫಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.