6:13 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಲೆನಾಡಿನಲ್ಲೂ ತಡೆಯಲಾರದ ಬಿಸಿಲಿನ ಧಗೆ: ಏರುತ್ತಿದೆ ತಾಪಮಾನ; ಎಳನೀರು, ತಂಪು ಪಾನೀಯಕ್ಕೆ ಹೆಚ್ಚಿದ ಬೇಡಿಕೆ

21/04/2023, 14:50

ಸಂತೋಷ್ ಅತ್ತಿಗೆರೆ, ಕೊಟ್ಟಿಗೆಹಾರ.
info.reporterkarnataka agnail.com
ಸದಾ ಏರ್ ಕಂಡೀಶನ್ ತರಹ ಇರುತ್ತಿದ್ದ ಮಲೆನಾಡಿನಲ್ಲಿಯೂ ಬಿಲಿನ ಝಳ ತೀವ್ರಗೊಂಡಿದೆ. ಹವಾಮಾನದ ವೈಪರೀತ್ಯದಿಂದ ಸುಡು ಬಿಸಿಲಿಗೆ ಜನ ಹೈರಾಣಾಗುತ್ತಿದ್ದಾರೆ. ಸಕಾಲಕ್ಕೆ ಮಳೆಯೂ ಇಲ್ಲದೇ ಜನರು ಸೆಖೆಯ ದಾಹ ತೀರಿಸಲು ತಂಪು ಪಾನೀಯಗಳಿಗೆ ಹಾಗೂ ಹಣ್ಣಿನ ರಸಗಳ ಸೇವನೆಗೆ ಮೊರೆ ಹೋಗುತ್ತಿದ್ದಾರೆ.
ಬೆಳಿಗೆ ಆರಂಭವಾಗುತ್ತಿದ್ದಂತೆ ಸ್ವಲ್ಪ ತಣ್ಣಗಿದ್ದ ಬಿಸಿಲ ತಾಪ ಮಧ್ಯಾಹ್ನವಾಗುತ್ತಿದ್ದಂತೆ ಬಿಸಿಲಿನ ಪ್ರಖರತೆ ತೀವ್ರವಾಗಿ ಜನರು ಹೊರಗೆ ಕಾಲಿಟ್ಟರೆ ಬಿಸಿಲು ತಲೆಯ ನೆತ್ತಿ ಸುಡುತ್ತಿದೆ.
ಮಾರ್ಚ್ ಗೆ ಹೋಲಿಸಿದರೆ ಮಲೆನಾಡಿನಲ್ಲಿ ಏಪ್ರಿಲ್ ಮಾಸದಲ್ಲಿ ಬಿಸಿಲಿನ ತಾಪ ಹೆಚ್ಚಳವಾಗುತ್ತಿದ್ದು ಮಲೆನಾಡಿನ ಸುತ್ತಮುತ್ತಲ ಜಿಲ್ಲೆಗಳಲ್ಲೂ ಕೂಡ ಹವಾಮಾನ ವೈಪರೀತ್ಯದಿಂದ ಸೂರ್ಯನ ತಾಪ ಹೆಚ್ಚಳಗೊಂಡಿದೆ. ಒಂದೆಡೆ ರಾಜಕೀಯ ಬಿಸಿ ಚುರುಕುಗೊಂಡಿದ್ದರೆ, ಹವಾಮಾನ ವೈಪರೀತ್ಯದಿಂದ ಜನರು ಹೈರಾಣಾಗುತ್ತಿದ್ದಾರೆ. ಕೇವಲ ದಕ್ಷಿಣ ಕನ್ನಡ, ರಾಯಚೂರು, ಕಲ್ಬುರ್ಗಿ ಮತ್ತಿತರ ಈಶಾನ್ಯ ಜಿಲ್ಲೆಗಳಲ್ಲಿ ಮಾತ್ರ ಸುಡು ಬಿಸಿಲಿನ ಸೆಕೆಯ ವಾತಾವರಣ ಬೇಸಿಗೆಯಲ್ಲಿ ಹೆಚ್ಚಾಗಿ ಕಂಡು ಬರುತ್ತಿತ್ತು.ಆದರೀಗ ಆ ಬಿಸಿಯ ತಾಪಮಾನ ಮಲೆನಾಡಿನ ಜಿಲ್ಲೆಯ ಭಾಗಗಳಲ್ಲೂ ದಾಖಲಾಗುತ್ತಿದೆ. ತೋಟ ಕಾರ್ಮಿಕರಿಗೂ ಕೂಡ ಬಿಸಿಲಿನ ತಾಪ ತಟ್ಟುತ್ತಿದೆ. ಬೇಸಿಗೆಯಲ್ಲಿ ಬೆಳಿಗ್ಗೆ 26 ಡಿಗ್ರಿ ಸೆಲ್ಸಿಯಸ್ ಇದ್ದರೆ ಮಧ್ಯಾಹ್ನ ಹೊತ್ತಿಗೆ 36 ಡಿಗ್ರಿವರೆಗೂ ಹೋಗುತ್ತಿದೆ. ಜನರು ಮಜ್ಜಿಗೆ, ದಾಕ್ಷಿ, ಸೇಬು, ಪೇರಳೆ, ಪರಂಗಿಹಣ್ಣು, ಕಲ್ಲಂಗಡಿ, ಕಬ್ಬಿನಹಾಲು, ಪುನರ್ಪುಳಿ ಪಾನೀಯ, ಎಳನೀರು ಜ್ಯೂಸ್ ಕಡೆ ಹೆಚ್ಚಿನ ಒಲವು ತೋರುತ್ತಿದ್ದು ತಂಪು ಪಾನೀಯಗಳಿಗೂ ಬೇಡಿಕೆ ಹೆಚ್ಚಿದಂತಾಗಿದೆ. ಎಳನೀರಿಗೆ ರೂ. 35, ಜ್ಯೂಸ್ ಗೆ ರೂ. 35-40 ಇತರೆ ಜ್ಯೂಸ್ ಗಳಿಗೆ ರೂ. 60 ವರೆಗೂ ಇದೆ. ಸುಡು ಬಿಸಿಲಿನಿಂದ ಹಣ್ಣಿನ ಜ್ಯೂಸ್ ಗೂ ಬೆಲೆ ಏರಿಕೆಯಾಗಿದೆ.ಮಳೆಯಿಲ್ಲದೇ ಬಿಸಿಲಿಗೆ ಕಾಫಿ ಮತ್ತಿತರ ಗಿಡಗಳು ಒಣಗುತ್ತಿವೆ. ಸುತ್ತಮುತ್ತಲಿನ ನದಿಗಳೂ ಕೂಡ ಬಿಸಿಲಿಗೆ ನೀರು ಒಣಗಿ ಹಲವು ಕಡೆ ಬತ್ತಿವೆ. ಈ ಬಾರಿ ಬಿಸಿಲಿನ ಬೇಗೆಯಿಂದ ಬರಗಾಲದಂತೆ ಭಾಸವಾಗುತ್ತಿದೆ. ಹಲವೆಡೆ ಕುಡಿಯುವ ನೀರಿನ ಸೌಲಭ್ಯಕ್ಕೂ ಸಂಚಕಾರವಿದೆ. ನೀರಿನ ಆಸರೆಗೆ ಪ್ರವಾಸಿಗರು ಬಾಟಲಿ ನೀರಿಗೆ ಮೊರೆ ಹೋಗುವಂತಾಗಿದೆ. ಜಾನುವಾರುಗಳು ಕೂಡ ಬಾಯಾರಿಕೆಗೆ ಹೈರಾಣಾಗುತ್ತಿವೆ.ಬಿಸಿಲಿನ ತಾಣಕ್ಕೆ ಹುಲ್ಲು ಕೂಡ ಒಣಗುತ್ತಿದ್ದು ಜಾನುವಾರು ಮೇವಿಗೂ ತೊಂದರೆಯಾಗುತ್ತಿದೆ.
ಸುಡು ಬಿಸಿಲಿಗೆ ಹೆಂಚಿನ ಮನೆಯ ಜನರು ಸ್ವಲ್ಪ ಮಟ್ಟಿಗೆ ತಂಪಾಗಿದ್ದರೂ ಸ್ಲ್ಯಾಬ್ ಮನೆಗಳಲ್ಲಿ ಜನರು ಒಳಗೆ ಕೂರಲು ಆಗದೆ ಸಂಜೆಯ ವಾತಾವರಣ ಯಾವಾಗ ಮೂಡುತ್ತೋ ಎಂದು ಪರಿತಪಿಸುವಂತಾಗಿದೆ. ಮಲೆನಾಡಿನಲ್ಲಿ ಮೇ ಮತ್ತು ಏಪ್ರಿಲ್ ಮಾಸದಲ್ಲಿ ವಾಡಿಕೆಯಷ್ಟು ಹಿಂಗಾರಿನ ಮಳೆಯಾಗುತ್ತಿದ್ದು ಈ ಬಾರಿ ಒಂದು ಬಾರಿ ಮಾತ್ರ ಹಗುರದಿಂದ ಸಾಮಾನ್ಯ ಮಳೆಯಾಗಿದ್ದು ವಾಡಿಕೆಯಷ್ಟು ಮಳೆಯಾಗದೇ ಇದರಿಂದ ಬಿಸಿಲಿನ ತಾಪ ಏರಿಕೆಯಾಗುತ್ತಿದೆ. ಕಾಫಿ ತೋಟಗಳಲ್ಲಿ ಮರಕಸಿ,ಕಾಡುಮರಗಳ ನಾಶ,ಜಾಗತಿಕ ತಾಪಮಾನ,ನಗರೀಕರಣದಂತಹ ಕಾರಣಗಳಿಂದಾಗಿ ಮಲೆನಾಡಿನಂತಹ ಭಾಗದಲ್ಲೂ ಮಳೆಯ ಅಭಾವ ಉಂಟಾಗಿ ತಾಪಮಾನ ಏರಿಕೆಗೆ ಕಾರಣವಾಗಿದೆ ಎನ್ನುತ್ತಾರೆ ಹಲವು ಪರಿಸರ ಪ್ರಿಯರು.
ಈ ಬಾರಿ ಬೇಸಿಗೆಯ ಸುಡು ಬಿಸಿಲು ಜನರನ್ನ ಕಂಗಾಲುಗೊಳಿಸಿದೆ.ಕಾಫಿ ಬೆಳೆಗಾರರು ನೀರಿನ ಕೊರತೆಯಿಂದ ತೋಟಕ್ಕೆ ನೀರಾಯಿಸಲು ಆಗದೆ ಸಂಕಷ್ಟ ಎದುರಿಸುವಂತಾಗಿದೆ’.

ಇತ್ತೀಚಿನ ಸುದ್ದಿ

ಜಾಹೀರಾತು