9:46 PM Sunday28 - June 2026
ಬ್ರೇಕಿಂಗ್ ನ್ಯೂಸ್
ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ…

ಇತ್ತೀಚಿನ ಸುದ್ದಿ

ಮಳೆಯಿಂದ ತತ್ತರಿಸಿದ ಪ್ರದೇಶಗಳಿಗೆ ಶಾಸಕ ಖಾದರ್ ಭೇಟಿ: ಸರಕಾರದ ವಿರುದ್ಧ ಗರಂ

06/07/2022, 22:11

ಮಂಗಳೂರು(reporterkarnataka.com):.ಕಳೆದ ಹಲವಾರು ದಿವಸಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಮಂಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಮನೆ ಹಾನಿ, ಗುಡ್ಡ ಕುಸಿತ ಸಂಭವಿಸಿದ್ದು ಶಾಸಕ ಯು.ಟಿ.ಖಾದರ್ ನಿರಂತರ ಭೇಟಿ ನೀಡಿ ಜನ ಸಂಪರ್ಕದಲ್ಲಿದ್ದುಕೊಂಡು ಸಾರ್ವಜನಿಕರಿಗೆ ಧೈರ್ಯ ತುಂಬಿದರು.

ಶಾಸಕ ಯು.ಟಿ.ಖಾದರ್ ಇಂದು  ಕ್ಷೇತ್ರ ವ್ಯಾಪ್ತಿಯ ತೊಕ್ಕೋಟು,ಕೆರೆಬೈಲು,ಹಳೆಕೋಟೆ,ಕೋಟೆಪುರ,ಮೊಗವೀರ ಪಟ್ಣ,ಬಟ್ಟಂಪಾಡಿ,ಉಚ್ಛಿಲ,ಮುನ್ನೂರು ಪ್ರದೇಶದಲ್ಲಿ ಮಳೆ ಹಾನಿ ಮತ್ತು ಕಡಲ್ಕೊರೆತ ಸಂಭವಿಸಿದ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಧೈರ್ಯ ತುಂಬಿ ಸರಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.

ಕಡಲ್ಕೊರೆತದಿಂದ ಭಾರೀ ಹಾನಿ ಸಂಭವಿಸಿದ ಉಳ್ಳಾಲ ನಗರ ಸಭೆ ವ್ಯಾಪ್ತಿಯ ಸೀ ಗ್ರೌಂಡ್ ಹಾಗೂ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಬಟ್ಟಂಪಾಡಿಯಂಥಹ ಪ್ರದೇಶಗಳಿಗೆ ಸರಕಾರದ ಯಾವುದೇ ಒಬ್ಬ ಸಚಿವರೂ ಭೇಟಿ ನೀಡದೇ ಇದ್ದುದರ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಖಾದರ್, ಇಂಥಹ ತುರ್ತು ಸಂದರ್ಭಗಳಲ್ಲಿ ತಕ್ಷಣ ಭೇಟಿ ನೀಡಿ ಪರಿಹಾರ ಕಂಡು ಕೊಳ್ಳುವುದು ಸರಕಾರದ ಜವಾಬ್ದಾರಿ. ಆದರೆ ಈವರೆಗೂ ಯಾವ ಸಚಿವರೂ ಭೇಟಿ ನೀಡದೇ ಇರುವುದರಿಂದ ಇದೊಂದು ಕರುಣೆ ಮತ್ತು ಮಾನವೀಯತೆ ಇಲ್ಲದ ಸರಕಾರ ಎಂದು ಕಿಡಿಕಾರಿದರು.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್  ಹಾಗೂ ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ

ಖಾದರ್,  ತಕ್ಷಣ ಜಿಲ್ಲಾ ಮಟ್ಟದ ಪ್ರಾಕೃತಿಕ ವಿಕೋಪದ ಸಭೆ ಕರೆದು ಹಾನಿ ಸಂಭವಿಸಿದ ಮನೆಗಳಿಗೆ ಪರಿಹಾರ ಒದಗಿಸಲು. ಅದೇ ರೀತಿ ಗುಡ್ಡ,ಗೋಡೆ ಕುಸಿತ ಸಂಭವಿಸಿದ ಪ್ರದೇಶಗಳಿಗೆ ಅನುದಾನ ಬಿಡುಗಡೆಗೊಳಿಸಿ ದುರಸ್ಥಿ ಪಡಿಸುವಂತೆ ಒತ್ತಾಯಿಸಿದರು.

ಕಡಲ್ಕೊರೆತದಿಂದ ಹಾನಿಗೊಳಗಾದ ತಡೆಗೋಡೆ ಹಾಗೂ ರಸ್ತೆ ನಿರ್ಮಾಣಕ್ಕಾಗಿ, ಈಗಾಗಲೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಅಂದಾಜು ಪಟ್ಟಿ ಸಲ್ಲಿಸಿದ ಉಳ್ಳಾಲ ಸೀಗ್ರೌಂಡ್ ಬಳಿ ಅರವತ್ತು ಲಕ್ಷ ಹಾಗೂ ಸೋಮೇಶ್ವರ ಬಟ್ಟಂಪಾಡಿಗೆ ಒಂದು ಕೋಟಿ ಮೂವತ್ತು ಲಕ್ಷ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ,ಸಚಿವದ್ವಯರು ಕೂಡಲೇ ಹಾನಿ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಬೇಕಾಗಿ ಆಗ್ರಹಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವದ್ವಯರು ಇದೇ ಬರುವ ಜುಲೈ 7ರಂದು ಜಿಲ್ಲಾ ಮಟ್ಟದ ಸಭೆ ಕರೆದು ಹಾನಿ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡುವುದಾಗಿಯೂ ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು