9:02 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ನಿಂದ ಪ್ರತಿರೋಧ; ಕದ್ರಿ ಎಸ್ ಐ ಟೋಪಿ ಹಾರಿಸಿದ ಪುಂಡರು

07/01/2022, 11:13

ಮಂಗಳೂರು(reporterkarnataka.com): ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮುಖಾಮುಖಿ ನಿಂತು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆದಿದ್ದು, ಈ ವೇಳೆ ಕದ್ರಿ ಸಬ್ ಇನ್ಸ್‌ಪೆಕ್ಟರ್ ಅವರ ಟೋಪಿ ಹಾರಿಸಿದ ಘಟನೆಯೂ ನಡೆಯಿತು.


ಪಂಜಾಬ್ ನ  ಕಾಂಗ್ರೆಸ್ ಸರಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಕ್ತ ಭದ್ರತೆ ಒದಗಿಸಿಲ್ಲ ಎಂದು ಆರೋಪಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ವತಿಯಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ನೇತೃತ್ವದಲ್ಲಿ ಪ್ರತಿರೋಧದ ಪ್ರತಿಭಟನೆಯೂ ನಡೆಯಿತು. ಉಭಯ ಪಕ್ಷದ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದರು. ಒಂದು ಹಂತದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆಯಿತು. ಉಭಯ ಪಕ್ಷಗಳ ಕಾರ್ಯಕರ್ತರು ತಮ್ಮ ತಮ್ಮ ಪಕ್ಷದ ಬಾವುಟವನ್ನು ಎತ್ತಿ ತಿರುಗಿಸುತ್ತಾ ಘೋಷಣೆ ಕೂಗಿದರು. 

ಈ ಸಂದರ್ಭದಲ್ಲಿ  ವ್ಯಕ್ತಿಯೊಬ್ಬ ಕದ್ರಿ ಪೊಲೀಸ್ ಠಾಣೆ ಎಸ್ಐ ಅವರ ತಲೆ ಮೇಲಿನ ಟೊಪ್ಪಿ ಹಾರಿಸಿದರು. ಇದಕ್ಕೂ ಮುನ್ನ ಎಸ್ ಐ ಅವರನ್ನು ಬೆನ್ನು ದಬ್ಬುವ ಪ್ರಯತ್ನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು