7:15 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿ

28/02/2026, 15:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿರಂತರ ಕಾಡಾನೆ ದಾಳಿಯಿಂದ ಮಲೆನಾಡಿಗರು ಕಂಗಾಲಾಗಿದ್ದು, ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಇಂದು ಕಾಡಾನೆ ದಾಳಿ ಪ್ರದೇಶಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿಯಾಗಲಿದ್ದು, ರೈತರು ಗ್ರಾಮಸ್ಥರ ಜೊತೆ ಸಂವಾದ ನಡೆಸಲಿದ್ದಾರೆ. ರೈತರ ಜೊತೆ ಅರಣ್ಯ ಸಚಿವ ಮಾತಕತೆ ನಡೆಸುವಂತೆ ಮಲೆನಾಡಿಗರು ಆಗ್ರಹಿಸಿದ್ದರು. ಅಧಿಕಾರಿಗಳು ಕೊಡೋ ಕಾರಣವೇ ಪರಿಹಾರವಲ್ಲ, ರೈತರ ಜೊತೆ ಚರ್ಚಿಸಿ ಎಂದು ಮಲೆನಾಡಿಗರು ಆಗ್ರಹಿಸಿದ್ದರು.
ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಲ್ಲಿ ಸಚಿವರು ಸಭೆ ನಡೆಸಲಿದ್ದಾರೆ.
ಇತ್ತೀಚಿಗೆ ಕಾಡಾನೆ ದಾಳಿಗೆ ಮಹಿಳೆ ಬಲಿ ವೇಳೆ ಕಡಬಗೆರೆಯಲ್ಲಿ ಕಲ್ಲು ತೂರಾಟ ನಡೆದಿತ್ತು. ಲಾಠಿ ಚಾರ್ಜ್ ನಡೆಸಿ ರೈತರ ತೀವ್ರ ಆಕ್ರೋಶಕ್ಕೆ ಜಿಲ್ಲಾಡಳಿತ ಗುರಿಯಾಗಿತ್ತು.
ಶವವನ್ನ ರಸ್ತೆಯಲ್ಲಿಟ್ಟು ಈಶ್ವರ ಖಂಡ್ರೆ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು