9:42 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಮಲ್ಪೆ ಬಂದರು ಪ್ರದೇಶದಲ್ಲಿ ದಿಢೀರ್ ಕಾರ್ಯಾಚರಣೆ: 16 ಮಂದಿ ಅಪ್ರಾಪ್ತ ಮೀನು ಆಯುವ ಮಕ್ಕಳ ರಕ್ಷಣೆ

03/11/2022, 19:23

ಉಡುಪಿ(reporterkarnataka.com):
ಮಲ್ಪೆ ಬಂದರು ಪ್ರದೇಶದಲ್ಲಿ ಮೀನು ಆಯುವ ಕೆಲಸ ಮಾಡುತ್ತಿದ್ದ ಹೊರ ಜಿಲ್ಲೆಗಳ ಸುಮಾರು 16 ಮಂದಿ ಅಪ್ರಾಪ್ತ ವಯಸ್ಸಿನ ಬಾಲಕರನ್ನು ದಿಢೀರ್ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಿಸಲಾಗಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ಉಡುಪಿ ಜಿಲ್ಲಾ ನಾಗರಿಕ ಸೇವಾ ಟ್ರಸ್ಟ್ ಹಾಗೂ ಹೊಸಬೆಳಕು ಸಂಸ್ಥೆ ಮಣಿಪಾಲ ಇವರು ಜಂಟಿ ಕಾರ್ಯಾಚರಣೆ ನಡೆಸಿ ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು ಹಾಗೂ 5 ಬಾಲಕರು ಸೇರಿ 16 ಮೀನು ಆಯುವ ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ನಿಟ್ಟೂರು ಇವರ ವಶಕ್ಕೆ ನೀಡಲಾಯಿತು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೊ ಮತ್ತು ಸದಸ್ಯರು ಮಕ್ಕಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಿದ್ದಾರೆ .


ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ್ , ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ವಿಜೇಂದ್ರ ,ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಸಮನ್ವಯ ಅಧಿಕಾರಿ ವಿ .ಡಿ .ಮೊಗೇರ ,ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕರಾದ ರೋಷನ್ ಕುಮಾರ್, .ಎನ್ .ಆರ್ .ಎಲ್ .ಎಂ .ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರಭಾಕರ ಆಚಾರ್ , ನಗರಸಭೆ ಅಧಿಕಾರಿ ನಾಗರಾಜ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ ,ಸಮಾಜ ಕಾರ್ಯಕರ್ತರಾದ ಯೋಗೀಶ್ ಸುರಕ್ಷಾ ,ಸಮಾಲೋಚಕಿ ಅಂಬಿಕಾ, ಔಟ್ ರೀಚ್ ವರ್ಕರ್ ಸಂದೇಶ ,ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕಿ ನಮ್ರತಾ, ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿಗಳಾದ ನವ್ಯಶ್ರೀ ,ಜಯಾ ,ಮಲ್ಪೆ ಠಾಣೆ ಸಿಬ್ಬಂದಿಗಳಾದ ಶಶಿಧರ್, ಮಲ್ಲನ ಗೌಡ ,ಪ್ರವೀಣ್, ನಾಗರಿಕ ಸೇವಾ ಟ್ರಸ್ಟ್ ನ ನಿತ್ಯಾನಂದ ಒಳಕಾಡು , ಮಕ್ಕಳ ಸಹಾಯವಾಣಿ ಸಮಾಲೋಚಕಿ ಜ್ಯೋತಿ ,ಹೊಸಬೆಳಕು ಸಂಸ್ಥೆಯ ತನುಲಾ ,ವಿನಯ ಆಚಾರ್ಯ ಮತ್ತಿತರರು ಕಾರ್ಯಾಚರಣೆಯಲ್ಲಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು