9:56 AM Monday14 - April 2025
ಬ್ರೇಕಿಂಗ್ ನ್ಯೂಸ್
Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ…

ಇತ್ತೀಚಿನ ಸುದ್ದಿ

ಮಲ್ಪೆ: ಸಮುದ್ರದಲ್ಲಿ ಮುಳುಗುತ್ತಿದ್ದ ಹೊರ ಜಿಲ್ಲೆಯ 4 ಮಂದಿ ಪ್ರವಾಸಿಗರ ರಕ್ಷಣೆ 

23/09/2021, 20:07

ಉಡುಪಿ(reporterkarnataka.com): ಸಮುದ್ರದಲ್ಲಿ ಈಜಲು ಹೋಗಿ ಅಲೆಯ ಅಬ್ಬರಕ್ಕೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ನಾಲ್ವರು ಹೊರ ಜಿಲ್ಲೆಯ ಪ್ರವಾಸಿಗರನ್ನು ಲೈಫ್‌ ಗಾರ್ಡ್ಸ್‌ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್‌ನಲ್ಲಿ ಗುರುವಾರ ನಡೆದಿದೆ. 

ಕಲಬುರ್ಗಿಯ ಅನಿಲ್ ಕುಮಾರ್ (21), ಅಬ್ಬಾಸ್ ಅಲಿ (19), ಅನಿಲ್ ಕುಮಾರ್ (21) ಹಾಗೂ ಮಂಡ್ಯ ಜಿಲ್ಲೆಯ ನೆರೆಕೆರೆಯ ನಿತಿನ್ (18) ರಕ್ಷಿಸಲಿಟ್ಟಿದ್ದಾರೆ.

ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡು ಅಲೆಗಳ ಉಬ್ಬರ ಹೆಚ್ಚಾಗಿರುತ್ತದೆ. ಹೆಚ್ಚು ಆಳಕ್ಕೆ ಇಳಿಯದಂತೆ ಲೈಫ್‌ಗಾರ್ಡ್ಸ್‌ ಸೂಚನೆ ನೀಡಿದರೂ ನಿರ್ಲಕ್ಷ್ಯದಿಂದ ಪ್ರವಾಸಿಗರು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಇದೇ ರೀತಿ ಸಮುದ್ರದಲ್ಲಿ ಮುಳುಗುತ್ತಿದ್ದ ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು