12:22 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಲ್ಪೆ: ಸಮುದ್ರದಲ್ಲಿ ನೀರಾಟವಾಡುತ್ತಿದ್ದಾಗ ಮುಳುಗಿ ತುಮಕೂರಿನ ಯುವಕ ಮೃತ್ಯು; ಇನ್ನಿಬ್ಬರ ರಕ್ಷಣೆ

06/10/2021, 23:24

ಉಡುಪಿ(reporterkarnataka.com): ಮಲ್ಪೆ ಕಡಲ ತೀರದಲ್ಲಿ ನೀರಿನಲ್ಲಿ ಆಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಬುಧವಾದ ನಡೆದಿದೆ.

ತುಮಕೂರಿನ ಅತ್ತರ್(23) ಎಂಬಾತ ಮೃತಪಟ್ಟ ಯುವಕ. ಬುಧವಾರ ಮಧ್ಯಾಹ್ನ 12. 00 ಗಂಟೆಗೆ ಮಲ್ಪೆ ಬೀಚ್ ಗೆ ಬಂದು ಮಧ್ಯಾಹ್ನ 2.00 ಗಂಟೆಗೆ ಸಲೀಂ, ಸಲ್ಮಾನ್, ಇಲಿಯಾಸ್, ಅರ್ಬಾಸ್, ಅತ್ತರ್, ಸುಹೇಲ್ ಅವರು  ನೀರಿನಲ್ಲಿ  ಆಟವಾಡಲು  ಸಮುದ್ರಕ್ಕೆ ಇಳಿದಿದ್ದಾರೆ. ಸಮುದ್ರದ ಅಲೆಗಳ ಅಬ್ಬರಕ್ಕೆ ಸಲ್ಮಾನ್, ಅರ್ಬಾಸ್, ಅತ್ತರ್ ನೀರಿನಲ್ಲಿ ಮುಳುಗಿದ್ದು, ಆ ಪೈಕಿ ಸಲ್ಮಾನ್ ಮತ್ತು ಅರ್ಬಾಸ್ ನನ್ನು ಮಲ್ಪೆ ಬೀಚ್ ನ ಟೂರಿಸ್ಟ್ ಬೋಟ್ ನವರು ರಕ್ಷಣೆ ಮಾಡಿದ್ದಾರೆ.

ಆದರೆ  ಅತ್ತರ್ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದು, ಮಧ್ಯಾಹ್ನ 3:00 ಗಂಟೆಗೆ ಅತ್ತರ್ ಮೃತದೇಹ ದೊರಕಿದೆ. ಅತ್ತರ್ ಮಲ್ಪೆ ಬೀಚ್ ನಲ್ಲಿ ಸಮುದ್ರದ ನೀರಿನಲ್ಲಿ ಆಟವಾಡುತ್ತಿರುವಾಗ ನೀರಿನ ಅಬ್ಬರಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು