8:37 PM Thursday17 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಮಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕಟ್ಟಡ ಕಾರ್ಮಿಕರಿಂದ ಪ್ರತಿಭಟನಾ ಪ್ರದರ್ಶನ

17/10/2024, 20:25

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರಾಜ್ಯವ್ಯಾಪಿ ಹೋರಾಟದ ಭಾಗವಾಗಿ ಕಟ್ಟಡ ಕಾರ್ಮಿಕರು ಅಖಿಲ ಭಾರತ ಮತ್ತು ರಾಜ್ಯಮಟ್ಟದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಪ್ರದರ್ಶನ ನಡೆಸಿದರು.
ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಅವರು, ಕಟ್ಟಡ ಕಾರ್ಮಿಕರಿಗೆ ಎರಡು ತಿಂಗಳಿನಿಂದ ಬಿಡುಗಡೆಯಾಗದ ಮಾಸಿಕ ಪಿಂಚಣಿ ಹಣವನ್ನು ಕೂಡಲೇ ಬಿಡುಗಡೆಗೊಳಿಸಬೇಕು, 2022 ರಿಂದ ಬಾಕಿ ಉಳಿಸಿಕೊಂಡಿರುವ ಶೈಕ್ಷಣಿಕ ಧನ ಸಹಾಯವನ್ನು ಹೈಕೋರ್ಟ್ ಆದೇಶದಂತೆ ಕೂಡಲೇ ನೀಡಬೇಕು, ನೊಂದಣಿ ನವೀಕರಣ ಸಮಸ್ಯೆಗಳನ್ನು ಇತ್ಯಾರ್ಥ ಪಡಿಸಲು ಕಲ್ಯಾಣ ಮಂಡಳಿ ಹಾಗೂ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದರು.
ದೇಶದಲ್ಲಿ ಅತ್ಯಂತ ವೇಗವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಯೋಜನೆಗಳು ನಡೆಯುತ್ತಿದ್ದರೂ ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಜನ ಕಾರ್ಮಿಕರು ಅತ್ಯಂತ ಅಪಾಯ ಸನ್ನಿವೇಶದಲ್ಲಿ ಸುರಕ್ಷತೆ ಇಲ್ಲದಂತಹ ವಾತಾವರಣದಲ್ಲಿ ಬದುಕು ಸಾಗಿಸುತ್ತಿದ್ದಾರೆ ವಲಸೆ ಕಾರ್ಮಿಕರ ಬದುಕು ಅಸಹನೀಯವಾಗಿದೆ. ಲಕ್ಷಾಂತರ ಮಹಿಳೆಯರು ನಿರ್ಮಾಣ ವಲಯದಲ್ಲಿದ್ದು ದುಡಿಮೆ ಮಾಡುತ್ತಿದ್ದರೂ ವೇತನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಸಮಾನ ಕೆಲಸಕ್ಕೆ ಸಮಾನ ಕೂಲಿ ನೀಡಬೇಕೆಂದಿದ್ದರೂ ಮಹಿಳೆಯರನ್ನು ವಂಚಿಸಲಾಗುತ್ತಿದೆ ಲೈಂಗಿಕ ಶೋಷಣೆಯು ಸದ್ದಿಲ್ಲದೆ ನಡೆಯುತ್ತಲೇ ಇದೆ ಎಂದು ಹೇಳಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಹಿಂದಿನ ಬಿಜೆಪಿ ಸರ್ಕಾರ ಹಾಗೂ ಇಂದಿನ ಸಮ್ಮಿಶ್ರ ಸರಕಾರವು 29 ಕಾರ್ಮಿಕ ಕಾನೂನುಗಳನ್ನು ನಾಲ್ಕು ಸಂಹಿತೆಗಳನ್ನಾಗಿ ಮಾಡಿದೆ . ಇದರಿಂದ 1996ರಲ್ಲಿ ಜಾರಿಗೊಳಿಸಲಾದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ ಹಾಗೂ ಸಸ್ ಕಾಯ್ದೆಗಳೆರಡೂ ಸಂಹಿತೆಯೊಳಗಡೆ ಸೇರಿ ಕಾರ್ಮಿಕರನ್ನು ಸೌಲಭ್ಯಗಳಿಂದ ಮತ್ತು ಕಾನೂನುಗಳಿಂದ ವಂಚಿತರನ್ನಾಗಿಸುತ್ತಿದೆ. ಕಟ್ಟಡ ನಿರ್ಮಾಣ ವಲಯ ಕಾರ್ಮಿಕರ ಬದುಕು ಹಾಗೂ ಅವರು ಹಾಲಿ ಇರುವ ಎರಡು ಕಾನೂನಿನ ಅಡಿಯಲ್ಲಿ ರಚಿಸಲಾದ ಕಲ್ಯಾಣ ಮಂಡಳಿಗಳು ಹಾಗೂ ಅವುಗಳ ದೊರಕುತ್ತಿದ್ದ ಕಲ್ಯಾಣ ಸೌಲಭ್ಯಗಳನ್ನು ಸಂರಕ್ಷಿಸಿಕೊಳ್ಳಲು ನಿರ್ಮಾಣ ವಲಯದ ಕಾರ್ಮಿಕರು ದೇಶದಾದ್ಯಂತ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ಒಂದರಿಂದ 15ರ ವರೆಗೆ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಪ್ರಚಾರಾಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಬೇಡಿಕೆಗಳಿಗೆ ಸರ್ಕಾರ ಈ ಕೂಡಲೇ ಗಮನಹರಿಸಬೇಕು, ಇಲ್ಲವಾದಲ್ಲಿ ರಾಜ್ಯದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.


ಕಟ್ಟಡ ಕಾರ್ಮಿಕರ ಜಿಲ್ಲಾ ಮುಖಂಡರಾದ ರವಿಚಂದ್ರ ಕೊಂಚಾಡಿ,ಯು. ಜಯಂತ್ ನಾಯಕ್, ಚಂದ್ರಹಾಸ ಪಿಲಾರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯ ನೇತೃತ್ವವನ್ನು ದಿನೇಶ್ ಜಪ್ಪಿನಮೊಗರು, ಪಾಂಡುರಂಗ ಕೊಂಚಾಡಿ , ಜನಾರ್ಧನ ಕುತ್ತಾರು, ವಸಂತಿ ಕುಪ್ಪೆಪದವು, ಯಶೋಧಾ ಮಳಲಿ, ಜಯಶೀಲ ವಾಮಂಜೂರು ವಹಿಸಿದ್ದರು ಪ್ರತಿಭಟನೆಯಲ್ಲಿ ರಾಮಚಂದ್ರ ಪಜೀರು, ರೋಹಿದಾಸ್ ಭಟ್ನಗರ , ಇಬ್ರಾಹಿಂ ಮದಕ, ಪ್ರವೀಣ್ ವಾಮಜೂರು, ಅಶೋಕ್ ಶ್ರೀಯಾನ್, ಅಶೋಕ್ ಸಾಲಿಯಾನ್ ಉಮೇಶ್ ಶಕ್ತಿನಗರ, ಶಶಿಧರ ಶಕ್ತಿನಗರ, ಮೋಹನ್ ಜಲ್ಲಿಗುಡ್ಡೆ , ರಿಚರ್ಡ್ ಕ್ರಾಸ್ತ, ಸುಧಾಕರ್ ಆಳ್ವ ತೊಕ್ಕೊಟ್ಟು ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು