8:54 PM Sunday19 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಶಾಸಕರು ಕ್ಷೇತ್ರ ಅಭಿವೃದ್ಧಿಗೆ ಏನು ಮಾಡಿದ್ದಾರೆ?, ಡಾ. ಭರತ್ ಶೆಟ್ಟಿ ಚರ್ಚೆಗೆ ಬರಲಿ: ಮಾಜಿ ಮೇಯರ್ ಕವಿತಾ ಸನಿಲ್ ಸವಾಲು

04/05/2023, 18:53

ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಯನ್ನೇ ಈ ಬಾರಿಯ ಚುನಾವಣೆಯಲ್ಲಿಯೂ ಮತ್ತೊಮ್ಮೆ ಪುನರುಚ್ಚರಿಸಿ ದ್ದಾರೆ. ಇದು ಹಳೆ ಮದ್ಯ ಹೊಸ ಬಾಟ್ಲಿಗೆ ಹಾಕಿದಂತೆ ಎಂದು ಮಾಜಿ ಮೇಯರ್ ಕವಿತಾ ಸನಿಲ್ ವ್ಯಾಖ್ಯಾನಿಸಿದ್ದಾರೆ.
ಸುರತ್ಕಲ್ ಸಮೀಪದ ಹೊಸಬೆಟ್ಟುವಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಗುರುವಾರ ಅವರು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.


ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯಲ್ಲಿರುವ ಭರವಸೆಗಳು ಕಳೆದ ಚುನಾವಣೆಯಲ್ಲಿ ನೀಡಿದ ಭರವಸೆಗಳಾಗಿವೆ. ಇದೊಂದು ದೊಡ್ಡ ಸುಳ್ಳಿನ ಕಂತೆ. ಈ ಕುರಿತು ತಾನು ಚರ್ಚೆಗೆ ಬರಲು ಸಿದ್ದ ಎಂದು ಶಾಸಕರಿಗೆ ಮಾಜಿ ಮೇಯರ್ ಸವಾಲು ಹಾಕಿದರು.
ರಸ್ತೆ, ತೋಡು ಕಾಮಗಾರಿ ನಡೆಸಲು ಶಾಸಕರು ಬೇಕಾಗಿಲ್ಲ. ಇಂತಹ ಸಣ್ಣ ಕೆಲಸಗಳನ್ನು ಮಾಡಲು ಕಾರ್ಪೋರೇಟರ್ ಗಳು ಸಾಕು. ಶಾಸಕರು ಉತ್ತರ ಕ್ಷೇತ್ರಗಳಿಗೆ ಬೇರೆ ಏನು ಸಾಧನೆ ಮಾಡಿದ್ದಾರೆ ಎಂಬ ಕುರಿತು ವಿವರ ನೀಡಲಿ. ಉತ್ತರ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಬೃಹತ್ ಹಾಗೂ ಮಧ್ಯಮ ಗಾತ್ರದ ಕೈಗಾರಿಕೆಗಳಿವೆ. ಶಾಸಕರು ಇಲ್ಲಿನ ಎಷ್ಟು ಮಂದಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ್ದಾರೆ ಎನ್ನುವುದರ ಕುರಿತು ಮಾಹಿತಿ ಒದಗಿಸಲಿ. ಹಿಂದುತ್ವದ ಹೆಸರಿನಲ್ಲಿ ಬಿಲ್ಲವ ಯುವಕರನ್ನು ಜೈಲಿಗೆ ತಳ್ಳಿದ್ದು ಬಿಟ್ಟರೆ ಇವರೇನು ಸಾಧನೆ ಮಾಡಿದ್ದಾರೆ ಎಂದು ಕವಿತಾ ಸನಿಲ್ ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡಕೇರಿ, ಮಾಜಿ ಉಪ ಮೇಯರ್ ಪುರುಷೋತ್ತಮ ಚಿತ್ರಾಪುರ, ಮಾಜಿ ಕಾರ್ಪೋರೇಟರ್ ದೀಪಕ್ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು