12:05 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ತೆರಿಗೆ ಹಣ ಬಂದಿದೆ, ಮೋದಿ ಕಾಲದಲ್ಲಿ ಎಷ್ಟು ಬಂತು ಶ್ವೇತಪತ್ರ ಹೊರಡಿಸಿ: ಸಿಎಂಗೆ ಸಿ.ಟಿ. ರವಿ ಆಗ್ರಹ

05/02/2024, 18:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ತೆರಿಗೆ ಹಣ ಬಂದಿದೆ. 2004-2014ರವರೆಗೆ ಎಷ್ಟು ತೆರಿಗೆ ಹಣ ಬಂತು ಎನ್ನುವ ಕುರಿತು ಶ್ವೇತಪತ್ರ ಹೊರಡಿಸಿ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಕನ್ವೀನ್ಸ್ ಮಾಡಲು ಆಗದಿದ್ರೆ ಕನ್ಫ್ಯೂಸ್ ಮಾಡು. ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಮಾಡಿದ್ದು ಅದೇ ಎಂದರು.


ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಆವರು,
2014-2024 ಫೆಬ್ರವರಿವರೆಗೆ ಮೋದಿ ಕೊಟ್ಟ ತೆರಿಗೆ ಹಣ ಎಷ್ಟು ಹೇಳಿ. ಇಬ್ಬರ ಅಡಳಿತಾವಧಿಯಲ್ಲಿ ಅನುದಾನ-ಸಹಾಯಧನ ಎಷ್ಟು ಶ್ವೇತಪತ್ರ ಹೊರಡಿಸಿ ಎಂದು ಸಿದ್ದರಾಮಯ್ಯಗೆ ಸವಾಲು ಹಾಕಿದರು.
2004-2014ರವರಗೆ ಕೇಂದ್ರದಿಂದ ಬಂದ ತೆರಿಗೆ ಹಣ 81795 ಕೋಟಿ. 2014-2023 ಡಿಸೆಂಬರ್ ವರೆಗೆ ಮೋದಿ ಕೊಟ್ಟಿದ್ದು 282791 ಕೋಟಿ.
2004-2014ರವರೆಗೆ ಸಿಂಗ್ ಕೊಟ್ಟ ಅನುದಾನ- ಸಹಾಯಧನ 60779 ಕೋಟಿ. 2014-2023ರವರಗೆ ಮೋದಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು 28832 ಕೋಟಿ. ಮೋದಿ ಕರ್ನಾಟಕಕ್ಕೆ ಹತ್ರತ್ರ ಮೂರುವರೆ ಲಕ್ಷ ಕೋಟಿ ಹಣ ನೀಡಿದ್ದಾರೆ ಎಂದು ರವಿ ನುಡಿದರು.
ಸಿಎಂ ಸಿದ್ದರಾಮಯಯ್ಯ ಒಂದು ದಿನವೂ ಜಿಎಸ್‍ಟಿ ಕೌನ್ಸಿಲ್ ಮೀಟಿಂಗ್ ಗೆ ಹೋಗಲಿಲ್ಲ. ನಾನೇಕೆ ಹೋಗಬೇಕು ಎಂಬ ಅಹಂಕಾರದಿಂದ ಒಂದು ದಿನವೂ ಮೀಟಿಂಗ್‍ಗೆ ಹೋಗಲಿಲ್ಲ.ಅನ್ಯಾಯವಾಗಿದ್ರೆ ಜಿಎಸ್‍ಟಿ ಮೀಟಿಂಗ್‍ನಲ್ಲಿ ಪ್ರಶ್ನೆ ಮಾಡಿ ನ್ಯಾಯ ಕೇಳಬಹುದಿತ್ತು ಎಂದು ಅವರು ನುಡಿದರು.
ಕೃಷ್ಣಭೈರೇಗೌಡ ಕೇಂದ್ರ ನೀತಿ ಎಲ್ಲಾ ಸಮಧಾನವಾಗಿದೆ ಎಂದು ಹೇಳಿ ಬರ್ತಾರೆ. ಹೊರಗಡೆ ಬಂದು ಕೇಂದ್ರಕ್ಕೆ ಬೈಯುತ್ತಾ ಸುಳ್ಳು ಹೇಳುತ್ತಾ ರಾಜಕಾರಣ ಮಾಡುತ್ತಾರೆ ಎಂದು ಮಾಜಿ ಸಚಿವರೂ ಆಗಿರುವ ಸಿ.ಟಿ.ರವಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು