6:41 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮಾನವೀಯ ನೆಲೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಯ ಮರು ನೇಮಕ: ಮುಖ್ಯಮಂತ್ರಿ ಸಿದ್ದರಾಮಯ್ಯ

27/05/2023, 23:14

ಬೆಂಗಳೂರು(reporterkarnataka.com): ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಗೆ ಮಾನವೀಯತೆಯ ನೆಲೆಯಲ್ಲಿ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ ಎಂದಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ
ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕ ನೆಲೆಯಲ್ಲಿ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರ ನೇಮಕಾತಿ ಮಾಡಲಾಗಿತ್ತು.
ಹಿಂದಿನ ಬಿಜೆಪಿ ಸರಕಾರ ಮಾಡಿದ ಎಲ್ಲ ತಾತ್ಕಾಲಿಕ ನೇಮಕಾತಿ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೂತನ ಕುಮಾರಿ ಅವರನ್ನು ಶುಕ್ರವಾರದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ಸರಕಾರ
ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ ಹೀಗಾಗಿ ನೇಮಕಾತಿ ರದ್ದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು