12:27 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಮನವಿಗಿಲ್ಲ ಸಿಎಂ ಪುರಸ್ಕಾರ: ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ರೋಹಿಣಿ ಸಿಂಧೂರಿ ನೇಮಕ

06/06/2021, 16:46

ಮಂಗಳೂರು(reporterkarnataka news): ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗಾವಣೆಗೊಂಡ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.ವರ್ಗಾವಣೆಗೆ ತಡೆ ನೀಡಬೇಕೆಂಬ ಸಿಂಧೂರಿ ಅವರ ಮನವಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುರಸ್ಕರಿಸಿಲ್ಲ.

ಸದಾ ವಿವಾದದ ಮೂಲಕ ಸುದ್ದಿಯಾಗುತ್ತಿದ್ದ ರೋಹಿಣಿ ಸಿಂಧೂರಿ ವಿರುದ್ಧ ರಾಜಕಾರಣಿಗಳು ಸೇರಿದಂತೆ ಕೆಲವು ಹಿರಿಯ ಅಧಿಕಾರಿಗಳು ಅಸಮಾಧಾನಗೊಂಡಿದ್ದರು. ಅವರ ವರ್ಗಾವಣೆಗೆ ಭಾರಿ ಪ್ರಯತ್ನವನ್ನು ಕೂಡ ನಡೆಸಿದ್ದರು. ಈ ನಡುವೆ ಜಿಲ್ಲಾಧಿಕಾರಿ ಸಿಂಧೂರಿ ಹಾಗೂ ಮೈಸೂರು ಮಹಾನಗರಪಾಲಿಕೆ ಕಮಿಷನರ್ ಶಿಲ್ಪಾ ನಾಗ್ ನಡುವೆ ಕಿತ್ತಾಟ ಆರಂಭವಾಯಿತು. ಶಿಲ್ಪಾ ನಾಗ್ ಅವರು ತನ್ನ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದರು. ಈ ನಡುವೆ ಇಬ್ಬರೂ ಅಧಿಕಾರಿಗಳ ವರ್ಗಾವಣೆ ನಡೆದಿದೆ.

ಇದೀಗ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಗೆ ನೇಮಿಸಲಾಗಿದೆ. ಸರಳ ಹಾಗೂ ಮೃದು ಸ್ವಭಾವದ ಪ್ರಾಮಾಣಿಕ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿ ಧಾರ್ಮಿಕ ದತ್ತಿ ಇಲಾಖೆಯ ಸಚಿವರು.

ಇತ್ತೀಚಿನ ಸುದ್ದಿ

ಜಾಹೀರಾತು