3:12 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮಂದಾರ್ತಿ ಉದ್ಯಮಿಗೆ ಆನ್‌ಲೈನ್ ವಂಚನೆ: 3 ಮಂದಿ ಆರೋಪಿಗಳ ಬಂಧನ

18/09/2022, 10:32

ಉಡುಪಿ(reporterkarnataka.com): ಆನ್ ಲೈನ್ ವಂಚನೆ ಪ್ರಕರಣ ದಿನ ಕಳೆದಂತೆ ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಮಂದಾರ್ತಿ ಮೂಲದ ಉದ್ಯಮಿಯೋರ್ವರು 3 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಸಹಾಯ ಪಡೆಯುವ ನೆಪದಲ್ಲಿ ಉದ್ಯಮಿಗೆ ವಂಚನೆ ಮಾಡಲಾಗಿದೆ.

ಸೆ.4 ರಂದು ಅನಾಮಧೇಯ ವ್ಯಕ್ತಿಯೊಬ್ಬ ಯುರೋ ಬಾಂಡ್ ಕಂಪನಿಯ ಮಾಲೀಕನೆಂದು, ಯುರೋ ಬಾಂಡ್ ಡೀಲರ್ ಆಗಿರುವ ಮಂದಾರ್ತಿಯ ಉದ್ಯಮಿಯೊಬ್ಬರಿಗೆ ಕರೆ ಮಾಡಿ, ತನ್ನ ಮಗ ಅಪಘಾತಕ್ಕೀಡಾಗಿ ಗಾಯಗೊಂಡಿದ್ದಾನೆ. ಮಗನನ್ನು ಮಂಗಳೂರಿನ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲು ತುರ್ತಾಗಿ 3 ಲಕ್ಷ ರೂ. ಹಣವನ್ನು ಖಾತೆಗೆ ಕಳುಹಿಸಿ ಕೊಡುವಂತೆ ಕೇಳಿಕೊಂಡಿದ್ದರು.

ಆ ಕರೆಗೆ ಸ್ಪಂದಿಸಿದ ಉದ್ಯಮಿ ತನ್ನ ಹಾಗೂ ಸ್ನೇಹಿತರ ಖಾತೆಯಿಂದ ಒಟ್ಟು 3 ಲಕ್ಷ ರೂ. ಹಣವನ್ನು ಆನ್‌ ಲೈನ್ ಮೂಲಕ ಹಾಕಿದ್ದರು. ನಂತರ ಅನುಮಾನಗೊಂಡು ಯುರೋ ಬಾಂಡ್ ಕಂಪನಿಗೆ ಸಂಪರ್ಕಿಸಿ ಮಾಹಿತಿ ಪಡೆದಾಗ ಉದ್ಯಮಿ ಮೋಸ ಹೋಗಿರುವುದು ತಿಳಿದು ಬಂದಿದೆ.

ಮೋಸ ಹೋಗಿರುವುದು ತಿಳಿದ ಕೂಡಲೇ ಉದ್ಯಮಿಯು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ವಂಚಕನ‌ ನಂಬರ್ ಟ್ರೇಸ್ ಮಾಡಿದಾಗ, ಗುಜರಾತ್ ರಾಜ್ಯದ ಸೂರತ್ ಪ್ರದೇಶದಲ್ಲಿ ತೋರಿಸುತ್ತಿತ್ತು. ಅವನು ಮಹಾರಾಷ್ಟ್ರ ಥಾಣೆ ಮೂಲದ ವ್ಯಕ್ತಿಯೊಬ್ಬನ ಖಾತೆಗೆ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ತಿಳಿದುಬಂದಿದೆ. ಕೂಡಲೇ ಉಡುಪಿ ಪೊಲೀಸರ ತಂಡ, ಮಹಾರಾಷ್ಟ್ರಕ್ಕೆ ತೆರಳಿ ಆನ್​​ ಲೈನ್ ವಂಚನೆ ಮಾಡಿದ ವಂಚಕ ಹಾಗೂ ಆತನ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದು ಉಡುಪಿಗೆ ಕರೆ ತಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು