12:49 AM Saturday10 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಮಂಡಗದ್ದೆಯಲ್ಲಿ 25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

17/11/2024, 17:37

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ 2024– 25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.
ಈ ಕಾರ್ಯಕ್ರಮವನ್ನು ಸಿ ಆರ್ ಸಿ ಮಂಡಗದ್ದೆಯಲ್ಲಿ ಮಂಡಗದ್ದೆ ಕ್ಲಸ್ಟರ್ ಮಟ್ಟದ ಶಿಕ್ಷಕರು ಉತ್ತಮವಾಗಿ ಆಯೋಜಿಸಿ ಸಂಘಟಿಸಿದ್ದರು. ಅಧ್ಯಕ್ಷತೆಯನ್ನು ಮಂಡಗದ್ದೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಜ್ಯೋತಿ ಪ್ರಮೋದ್ ಅವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಿಂಗನ ಬಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಗ್ರಾಮೀಣ ಮಕ್ಕಳ ಪ್ರತಿಭೆಯನ್ನ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮವಾದ ವೇದಿಕೆಯಾಗಿದೆ. ಶಿಕ್ಷಕರು, ಪೋಷಕರು, ಎಸ್‌ ಡಿ ಎಂ ಸಿ ಯವರು, ಸ್ಥಳೀಯರು ಶಿಕ್ಷಣಾಸಕ್ತರು ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಒಂದು ವೇದಿಕೆಯನ್ನು ಒದಗಿಸಿಕೊಡುವಂತಹ ಜವಾಬ್ದಾರಿ ಇದೆ. ಮಕ್ಕಳಲ್ಲಿ ಆರೋಗ್ಯಕರವಾದಂತಹ ಸ್ಪರ್ಧೆಯನ್ನು ಏರ್ಪಡಿಸಿ ಅವರಲ್ಲಿರುವ ಕಲೆಯನ್ನ ಪತ್ತೆ ಹಚ್ಚಲು ಪ್ರತಿಭಾ ಕಾರಂಜಿ ಒಂದು ಅತ್ಯುತ್ತಮ ವೇದಿಕೆ ಎಂದರು.
ಇಲಾಖೆಯ ಆಶೋತ್ತರಗಳನ್ನು ಮತ್ತೆ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿಭಾ ಕಾರಂಜಿ ತಂಡೋಪಾದಿಯಲ್ಲಿ ಕೆಲಸ ನಿರ್ವಹಿಸಿ ಯಶಸ್ವಿಗೆ ಕಾರಣರಾದ ಪ್ರಕಾಶ್ ತಳಲೇ, ಅಶೋಕ್, ತಿಪ್ಪಣ್ಣ , ಶಿವಣ್ಣ, ಅನಿತಾ ಅವರ ಕೆಲಸಗಳನ್ನು ಸ್ಮರಿಸುತ್ತ, ಸಿ ಆರ್ ಪಿ. ಸರಸ್ವತಿ ಮಂಡಗದ್ದೆ ಕ್ಲಸ್ಟರ್ ಪ್ರಾಸ್ತಾವಿಕ ನುಡಿಯಲ್ಲಿ ವಿವರಿಸಿದರು.
ಮಂಡಗದ್ದೆ ಮತ್ತು ಸಿಂಗನ ಬಿದರೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು ಸದಸ್ಯರು ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸತೀಶ್ ರವರು ಮಂಡಗದ್ದೆ ಗ್ರಾಮ ಪಂಚಾಯಿತಿಯ ಸದಸ್ಯರು ಸಮಸ್ತ ಶಿಕ್ಷಕರು ಹಾಗು ಸಿ ರ್ ಪಿ ಕೇಂದ್ರ ಹಾಗು ಇಲಾಖೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಮಕ್ಕಳಿಗೆ ಶುಭಾಶಯಗಳು ಕೋರಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ರ ಕಾರ್ಯಕ್ರಮದ ಉತ್ತಮ ಆಯೋಜನೆಯ ಬಗ್ಗೆ ಸಮಸ್ತ ಶಿಕ್ಷಕರನ್ನು ಪ್ರಶಂಸಿಸಿ ಅಭಿನಂದನೆ ತಿಳಿಸಿ ಮಕ್ಕಳಿಗೆ ಶುಭ ಹಾರೈಸಿ , ಕಾರ್ಯಕ್ರಮದ ಬಗ್ಗೆ ಪ್ರೋತ್ಸಾಹದ ಮಾತುಗಳನ್ನು ಆಡಿದರು. ಈ ಸಂದರ್ಭದಲ್ಲಿ ಅಕ್ಷರ ದಾಸೋಹದ ನಿರ್ದೇಶಕರಾದ ಪ್ರವೀಣ್. ಸಮನ್ವಯಾಧಿಕಾರಿ ಗಳಾದ ಮಂಜುನಾಥ್, ಶಿಕ್ಷಣ ಸಂಯೋಜಕರಾದ ಜ್ಯೋತಿ , ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ನಾಗರಾಜ್ ಉಪಸ್ಥಿತರಿದ್ದರು. ಮೂಕಾಂಬಿಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರು ಶುಭ ಹಾರೈಸಿದರು. ಆರತಿ , ಚಂದ್ರಕಲಾ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು,ಮಕ್ಕಳು, ಗ್ರಾಮಸ್ಥರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು