10:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಹಾಲಿಗೆ ನೀರಾಯ್ತು, ಈಗ ರಾಸಾಯನಿಕ ಮಿಶ್ರಣ

22/01/2022, 08:42

ಮಂಡ್ಯ(reporterkarnataka.com): ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಹಾಲಿಗೆ ನೀರು ಮಿಶ್ರಣ ಹಗರಣ ಆಯ್ತು, ಇದೀಗ ಹಾಲಿಗೆ ರಾಸಾಯನಿಕ ಬೆರಕೆ ಮಾಡುವುದು ಗೊತ್ತಾಗಿದೆ. ಇದರೊಂದಿಗೆ

ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಮನ್‌ಮುಲ್‌ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ.

ಕಳೆದ ವರ್ಷವಷ್ಟೇ ಮನ್‌ಮುಲ್‌‌ಗೆ ಸರಬರಾಜು ಆಗುವ ಹಾಲಿಗೆ ನೀರು ಮಿಶ್ರಣವಾಗುತ್ತಿದೆ ಎಂಬ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣ ಸಿಐಡಿ ತನಿಖೆಯಲ್ಲಿರುವಾಗಲೇ ಹಾಲಿಗೆ ರಾಸಾಯನಿಕ ಕಲಬೆರಕೆ ಹಗರಣ ಬೆಳಕಿಗೆ ಬಂದಿರುವುದು ರೈತರಲ್ಲಿ ಆತಂಕ ಮೂಡಿದೆ.

ಏನಿದು ಹಾಲಿಗೆ ರಾಸಾಯನಿಕ ಬೆರಕೆ.?: ಪರೀಕ್ಷೆಯಲ್ಲಿ ಹಾಲಿನ ಗುಣಮಟ್ಟ ಹೆಚ್ಚು ತೋರಿಸುವಂತೆ ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಹಾಲಿಗೆ ನೀರು ಹಾಕಿದಾಗ ಕಡಿಮೆ ಕೊಬ್ಬಿನಾಂಶ ತೋರಬಾರದೆಂದು ರಾಸಾಯನಿಕ ಬೆರಕೆ ಮಾಡಲಾಗುತ್ತಿತ್ತು. ಉಪ್ಪಿನಾಂಶದ ರಾಸಾಯನಿಕ ಕಲಬೆರಕೆಯನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಟ್ಯಾಂಕರ್‌ನೊಳಗೆ ಮತ್ತೊಂದು ಬೇಬಿ ಟ್ಯಾಂಕ್ ನಿರ್ಮಿಸಿ ಕೋಟಿ ಕೋಟಿ ಹಣವನ್ನು ಹಾಲಿನ ರೂಪದಲ್ಲಿ ಮನ್‌ಮುಲ್‌ಗೆ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್‌ನ ನಿಜರೂಪ ಬಯಲಾಗಿದೆ.

ಹೇಗೆ ಬೆಳಕಿಗೆ ಬಂತು?: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಗೆರೆ ಡೈರಿಯಿಂದ ಪೂರೈಕೆಯಾಗುತ್ತಿದ್ದ ಹಾಲಿನಲ್ಲಿ ಮೊದಲಿಗೆ ರಾಸಾಯನಿಕ ಮಿಶ್ರಣ ಪತ್ತೆಯಾಗಿದೆ. ಗ್ರಾಮದಲ್ಲಿ ಶೇಖರಣೆಯಾದ ಹಾಲಿಗೆ ನೀರು ಹಾಗೂ ರಾಸಾಯನಿಕ ಬೆರಸಿ ಮನ್‌ಮುಲ್‌ಗೆ ವಂಚನೆ ಮಾಡುತ್ತಿರುವ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಬಂದಿದೆ. ನಂದಿನಿ ಹಾಲಿನ ಮೇಲೆ ಅನುಮಾನ ಮೂಡುವಂತೆ ವಂಚಕರು ಪ್ಲ್ಯಾನ್ ಮಾಡಿದ್ದಾರೆ. ಪ್ರತಿನಿತ್ಯ 35 ಕ್ಯಾನ್ ಹಾಲು ಸರಬರಾಜು ಮಾಡುತ್ತಿದ್ದ ಕೆ.ಹೊನ್ನಲಗೆರೆ ಡೈರಿಯ ಮೇಲೆ ಅನುಮಾನ ವ್ಯಕ್ತಪಡಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಇದು ಬೆಳಕಿಗೆ ಬಂದಿದೆ. ಇದೀಗ ಕೆ.ಹೊನ್ನಲಗೆರೆ ಡೈರಿಯಲ್ಲಿ ಹಾಲು ಶೇಖರಣೆ ಸ್ಥಗಿತಗೊಳಿಸುವಂತೆ ಮನ್‌ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು